IPL | ರಿವೇಂಜ್ ಗೇಮ್ ಮೂಡ್ ಆನ್.. ಇವತ್ತಿನ ಮ್ಯಾಚ್ ಯಾರು ಗೆಲ್ತಾರೋ ಅವ್ರೆ ನಂ.1 ರಾಜ!

ಹೊಸದಿಗಂತ ಡಿಜಿಟಲ್ ಡೆಸ್ಕ್:

IPL ​ನ 46ನೇ ಪಂದ್ಯದಲ್ಲಿ RCB ಹಾಗೂ DC ತಂಡಗಳು ಇಂದು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ IPL ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರುವುದು ಫಿಕ್ಸ್.

ಪ್ರಸ್ತುತ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 12 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, ಆರ್​ಸಿಬಿ ತಂಡ 12 ಪಾಯಿಂಟ್ಸ್​ನೊಂದಿಗೆ ತೃತೀಯ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ 14 ಅಂಕಗಳೊಂದಿಗೆ ಗುಜರಾತ್ ಟೈಟಾನ್ಸ್ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಲಿದೆ.

ಇಂದಿನ ಪಂದ್ಯದಲ್ಲಿ ಜಯಗಳಿಸುವ ತಂಡವು ತನ್ನ ಪ್ಲೇಆಫ್​ ಹಾದಿಯನ್ನು ಮತ್ತಷ್ಟು ಸುಗಮಗೊಳಿಸಲಿದೆ. ಅಲ್ಲದೆ ಮುಂದಿನ 4 ಮ್ಯಾಚ್​ಗಳಲ್ಲಿ ಒಂದು ಜಯ ಸಾಧಿಸಿದರೆ 16 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಬಹುದು. ಹೀಗಾಗಿ ಇಂದಿನ ಮ್ಯಾಚ್ ಉಭಯ ತಂಡಗಳಿಗೆ ಮಹತ್ವದ ಪಂದ್ಯವಾಗೋದು ಖಂಡಿತ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!