April 5, 2026
Sunday, April 5, 2026
spot_img

IPL | ಟೈಟನ್ಸ್ ಕೋಟೆಯಲ್ಲಿ ರಾಯಲ್ಸ್ ಹವಾ: ಅಹಮದಾಬಾದ್‌ನಲ್ಲಿ ರಾಜಸ್ಥಾನ್ ವಿಜಯ ಪತಾಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಹೈ-ವೋಲ್ಟೇಜ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 7 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ರಾಜಸ್ಥಾನ್ ಸತತ ಎರಡನೇ ಗೆಲುವು ದಾಖಲಿಸಿದರೆ, ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ ಗುಜರಾತ್ ಸತತ ಎರಡನೇ ಸೋಲಿನ ಆಘಾತ ಅನುಭವಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್, ಯಶಸ್ವಿ ಜೈಸ್ವಾಲ್ (55 ರನ್, 36 ಎಸೆತ) ಮತ್ತು ಧ್ರುವ್ ಜುರೆಲ್ (75 ರನ್, 41 ಎಸೆತ) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 210 ರನ್​ಗಳ ಬೃಹತ್ ಮೊತ್ತ ಕಲೆಹಾಕಿತು. ಯುವ ಆಟಗಾರ ವೈಭವ್ ಸೂರ್ಯವಂಶಿ 33 ರನ್ ಕಾಣಿಕೆ ನೀಡಿದರು. ಗುಜರಾತ್ ಪರ ಕಗಿಸೋ ರಬಾಡ 2 ವಿಕೆಟ್ ಪಡೆದು ಗಮನ ಸೆಳೆದರು.

ಬೃಹತ್ ಗುರಿ ಬೆನ್ನಟ್ಟಿದ ಗುಜರಾತ್‌ಗೆ ಸಾಯಿ ಸುದರ್ಶನ್ (73 ರನ್, 44 ಎಸೆತ) ಅದ್ಭುತ ಆರಂಭ ನೀಡಿದರು. ಮೊದಲ ವಿಕೆಟ್‌ಗೆ 78 ರನ್ ಸೇರಿಸಿದರೂ, ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯ ತಂಡಕ್ಕೆ ಮುಳುವಾಯಿತು. ಅಂತಿಮ ಹಂತದಲ್ಲಿ ರಶೀದ್ ಖಾನ್ (24) ಮತ್ತು ರಬಾಡ (23) ಜಯಕ್ಕಾಗಿ ಶತಪ್ರಯತ್ನ ನಡೆಸಿದರೂ, ಗುಜರಾತ್ 204 ರನ್ ಗಳಿಸಲಷ್ಟೇ ಶಕ್ತವಾಯಿತು. ಅಂತಿಮ ಓವರ್‌ನಲ್ಲಿ ತುಷಾರ್ ದೇಶಪಾಂಡೆ ಅದ್ಭುತ ಬೌಲಿಂಗ್ ಪ್ರದರ್ಶಿಸಿ ರಾಯಲ್ಸ್ ಪಡೆಗೆ ಗೆಲುವು ತಂದುಕೊಟ್ಟರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !