Tuesday, August 16, 2022

Latest Posts

ಇಂದಿನಿಂದ IPL ಸೆಕೆಂಡ್ ಇನ್ನಿಂಗ್ಸ್ ಆರಂಭ: ಚೆನ್ನೈ-ಮುಂಬೈ ನಡುವೆ ಮೊದಲ ಸೆಣೆಸಾಟ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೋವಿಡ್ ಸೋಂಕು ಭೀತಿ ಹಿನ್ನೆಲೆದಿಂದ ಭಾರತದಲ್ಲಿ ಅರ್ಧಕ್ಕೆ ನಿಂತಿದ್ದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ( IPL) ಟೂರ್ನಿಗೆ ಇಂದು ಮರುಚಾಲನೆ ಸಿಗಲಿದೆ.

ಹೌದು.. ಇಂದಿನಿಂದ ಯುಎಇಯಲ್ಲಿ ಐಪಿಎಲ್ ಸೆಕೆಂಡ್ ಇನ್ನಿಂಗ್ಸ್ ಆರಂಭವಾಗಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಇಂದು ಸೆಣೆಸಾಡಲಿದ್ದಾರೆ.

ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 15ರ ತನಕ ದುಬೈ, ಶಾರ್ಜಾ, ಅಬುಧಾಬಿಯಲ್ಲಿ ಉಳಿದ 31 ಪಂದ್ಯಗಳು ನಡೆಯಲಿದ್ದು, ಕ್ರಿಕೆಟ್‌ ಪ್ರೇಮಿಗಳಿಗೆ ಇಂದಿನಿಂದ ಹಬ್ಬದೌತಣ ಸಿಗಲಿದೆ.

ಮೇ 2ರಂದು ಅಹ್ಮದಾಬಾದ್‌ನಲ್ಲಿ ಪಂಜಾಬ್‌-ಡೆಲ್ಲಿ ನಡುವಿನ ಪಂದ್ಯದ ಬಳಿಕ ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಪಂದ್ಯವನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಸೆಕೆಂಡ ಇನ್ನಿಂಗ್ಸ್ ಆರಂಭವಾಗಿದೆ. ಈ ಸಲ ಪಂದ್ಯಕ್ಕೆ ಕೊರೋನಾ ಸಹಕಾರ ಎಷ್ಟಿರಲಿದೆ ಕಾದು ನೋಡಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss