ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ ಇಂದಿನ ಡಬಲ್ ಹೆಡರ್ ಪಂದ್ಯಗಳಲ್ಲಿ ಮೊದಲನೇ ಹಣಾಹಣಿಗೆ ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣ ಸಾಕ್ಷಿಯಾಗುತ್ತಿದೆ. ಸನ್ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಕ್ರೀಡಾಂಗಣದಲ್ಲಿ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿದೆ.
ಪಂದ್ಯದ ಆರಂಭದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್, ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಆ ಮೂಲಕ ಸನ್ರೈಸರ್ಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ನೀಡಿದ್ದಾರೆ.
2026ರ ಐಪಿಎಲ್ ಸೀಸನ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವು ತನ್ನ ಸ್ವಂತ ಮೈದಾನದಲ್ಲಿ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ.
ಹೈದರಾಬಾದ್ ತನ್ನ ತವರಿನ ಅಭಿಮಾನಿಗಳ ಮುಂದೆ ಭರ್ಜರಿ ಆರಂಭ ಪಡೆಯುತ್ತಾ ಅಥವಾ ಲಕ್ನೋ ಬೌಲರ್ಗಳು ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.



