ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2025 ರಲ್ಲಿ ಗುಜರಾತ್ ಟೈಟಾನ್ಸ್ ತನ್ನ ಗೆಲುವಿನ ಖಾತೆಯನ್ನು ತೆರೆದಿದೆ. ಅಹಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್, ಮುಂಬೈ ಇಂಡಿಯನ್ಸ್ ತಂಡವನ್ನು 36 ರನ್‌ಗಳಿಂದ ಸೋಲಿಸಿದೆ. ಈ ಮೂಲಕ ಗುಜರಾತ್ ತಂಡವು ಮೊದಲ ಗೆಲುವು ಸಾಧಿಸಿದೆ.
ಇತ್ತ ಮುಂಬೈ ತಂಡ ಸತತ ಎರಡನೇ ಸೋಲನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಮುಂಬೈಗೆ ಉತ್ತಮ ಆರಂಭ ಸಿಗಲಿಲ್ಲ. ಮುಂಬೈ ಪರ ಸೂರ್ಯಕುಮಾರ್ 48 ರನ್ ಬಾರಿಸಿದ್ದು ಬಿಟ್ಟರೆ ಉಳಿದವರಿಂದ ಅಷ್ಟಾಗಿ ಪ್ರದರ್ಶನ ಕಂಡುಬರಲಿಲ್ಲ.
ಗುಜರಾತ್ ಪರ ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ ತಲಾ ಎರಡು ವಿಕೆಟ್ ಪಡೆದರೆ, ಕಗಿಸೊ ರಬಾಡ ಮತ್ತು ಆರ್ ಸಾಯಿ ಕಿಶೋರ್ ತಲಾ ಒಂದು ವಿಕೆಟ್ ಪಡೆದರು.