ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ನ ಮುಲ್ಲನ್‌ಪುರದ ಮಹಾರಾಜ ಯದ್ವಿಂದರ್ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2025 ರ ಐಪಿಎಲ್ ಕ್ವಾಲಿಫೈಯರ್ 1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದ ಆರ್ಸಿಬಿ, ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಫೈನಲ್ಗೆ ಲಗ್ಗೆ ಇಟ್ಟಿದೆ.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್, ಆರ್ಸಿಬಿ ಬೌಲರ್ಗಳ ಬೆಂಕಿ ಆಟಕ್ಕೆ ಕೇವಲ 101 ರನ್ಗಳಿಗೆ ಆಲೌಟ್ ಆಯಿತು.
ಈ ಗುರಿಯನ್ನು ಬಹಳ ಸುಲಭವಾಗಿ ಬೆನ್ನಟ್ಟಿದ ಆರ್ಸಿಬಿ ಕೇವಲ 10 ಓವರ್ ಅಲ್ಲಿ 106 ರನ್ ಅನ್ನು ಪಡೆಯುವಲ್ಲಿ ಯಶಸ್ವಿಯಾಯಿತು.
ಇನ್ನು ಆರ್ಸಿಬಿ ವಿರುದ್ಧ ಸೋತಿರುವ ಪಂಜಾಬ್, ನಾಳೆ ನಡೆಯಲ್ಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡವನ್ನು, ಕ್ವಾಲಿಫೈಯರ್ 2 ರಲ್ಲಿ ಎದುರಿಸಲಿದೆ. ಆ ಪಂದ್ಯದಲ್ಲಿ ಗೆದ್ದ ತಂಡ ಬರುವ ಮಂಗಳವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು ಎದುರಿಸಲಿದೆ.