ಐಪಿಎಲ್‌ ಟಿಕೆಟ್‌ ಮಾರಾಟ ದಂಧೆ: ಇಬ್ಬರು ಪೊಲೀಸರು ಸೇರಿದಂತೆ ನಾಲ್ವರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮೇ 17 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯದ ಐಪಿಎಲ್ ಟಿಕೆಟ್‌ಗಳನ್ನುಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸರು ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧನಕ್ಕೊಳಗಾಗಿರುವ ಇಬ್ಬರು ಪೊಲೀಸರನ್ನು ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಪೊಲೀಸ್ ಕಾನ್‌ಸ್ಟೇಬಲ್‌ ವೆಂಕಟಗಿರಿ ಗೌಡ ಮತ್ತು ಹಲಸೂರು ಸಂಚಾರ ಪೊಲೀಸ್ ಠಾಣೆಗೆ ಸೇರಿದ ರವಿಚಂದ್ರ ಎಂದು ಗುರುತಿಸಲಾಗಿದೆ. ಇತರ ಇಬ್ಬರು ಆರೋಪಿಗಳನ್ನು ಶಂಕರ್ ಮತ್ತು ಸುರೇಶ್ ಎಂದು ಗುರುತಿಸಲಾಗಿದೆ.

ಪಂದ್ಯದ ದಿನದಂದು ಸಂಜೆ 4 ಗಂಟೆ ಸುಮಾರಿಗೆ ವಿಜಯನಗರದ ನಚಿಕೇತ ಪಾರ್ಕ್ ಆಟದ ಮೈದಾನದ ಬಳಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದಾಗ ಗೋವಿಂದರಾಜ ನಗರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದರು.

ಈ ವೇಳೆ ಪರಾರಿಯಾಗಿದ್ದ ಇಬ್ಬರು ಪೊಲೀಸರು ನಿರೀಕ್ಷಣಾ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ನಂತರ ಪೊಲೀಸರು ಬಂಧನದ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ್ದು, ಆರೋಪಿಗಳಿಂದ ಸುಮಾರು 52 ಐಪಿಎಲ್ ಟಿಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!