ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಅಭಿಮಾನಿಗಳ ಕಣ್ಣಿಗೆ ಹಬ್ಬ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಸೋಲು ಅನುಭವಿಸುವ ಮೂಲಕ ತವರಿನಲ್ಲಿ ಹ್ಯಾಟ್ರಿಕ್ ಸೋಲು ಕಂಡ ಆರ್‌ಸಿಬಿ ಇಂದು ಪಂಜಾಬ್‌ಗೆ ತವರಿನಲ್ಲೇ ಬುದ್ದಿ ಕಲಿಸಲು ಕಾತರದಿಂದ ಕಾಯುತ್ತಿದೆ.
18ನೇ ಆವೃತ್ತಿಯಲ್ಲಿ 3ನೇ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4ನೇ ಸ್ಥಾನಕ್ಕೆ ಇಳಿದಿದೆ. ಇನ್ನು 4ನೇ ಸ್ಥಾನದಲ್ಲಿದ್ದ ಪಂಜಾಬ್ ಕಿಂಗ್ಸ್ 2ನೇ ಸ್ಥಾನಕ್ಕೆ ಏರಿದೆ.
ಶುಕ್ರವಾರದ ಮಳೆಯಿಂದಾಗಿ ಪಂದ್ಯವನ್ನು 14 ಓವರ್‌ಗೆ ಸೀಮಿತಗೊಳಿಸಲಾಗಿತ್ತು. ಟಿಮ್ ಡೇವಿಡ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆರ್‌ಸಿಬಿ ನೀಡಿದ್ದ 96 ರನ್‌ಗಳ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡ 11 ಎಸೆತಗಳು ಬಾಕಿ ಉಳಿದಿರುವಂತೆ 5 ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು. ಇಂದು ಪಂಜಾಬ್‌ಗೆ ತವರಿನಲ್ಲೇ ಬಗ್ಗು ಬಡಿಯಲು ಕೆಂಪು ಪಡೆ ಸಜ್ಜಾಗಿದೆ.