ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಜೈಲು ಸೇರಿದ್ದ ಅಮೃತ್ ಪಾಲ್ ಅವರಿಗೆ ಜಾಮೀನು ದೊರೆತಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಸೆಪ್ಟಂಬರ್ 25 ರಂದು ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಜಾಮೀನು ಆದೇಶದ ಪ್ರತಿ ಇಂದು ಜೈಲಿಗೆ ತಲುಪಿದ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿದೆ.
5 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್, ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ಜಾಮೀನು ದೊರೆತ ನಂತರವೂ ತನಿಖೆಗೆ ಸಹಕಾರ ನೀಡಬೇಕು. ಸಾಕ್ಷ್ಯಾಧಾರಗಳ ನಾಶಕ್ಕೆ ಯತ್ನಿಸಬಾರದು. ಸಾಕ್ಷಿಗಳು ಮತ್ತು ತನಿಖಾಧಿಕಾರಿಗಳ ಮೇಲೆ ಪ್ರಭಾವ ಬೀರಬಾರದು. ಕೋರ್ಟ್ ಅನುಮತಿ ಇಲ್ಲದೆ ವಿದೇಶಕ್ಕೆ ಹೋಗಬಾರದು ಎಂದು ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ.