ಕುಮಾರಸ್ವಾಮಿಗೆ ʼಹಂದಿʼ ಎಂದ ಐಪಿಎಸ್‌ ಅಧಿಕಾರಿ: ಕ್ರಮಕ್ಕೆ ಜೆಡಿಎಸ್‌ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೇಂದ್ರ ಸಚಿವ ಹಾಗೂ ಜೆಡಿಎಸ್ ವರಿಷ್ಠ ಎಚ್‌ಡಿ ಕುಮಾರಸ್ವಾಮಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಜೆಡಿಎಸ್ ಆಗ್ರಹಿಸಿದೆ.

ಭ್ರಷ್ಟಾಚಾರ, ದುರ್ನಡತೆ, ಸುಲಿಗೆ ಮುಂತಾದ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಎಡಿಜಿಪಿ ಚಂದ್ರಶೇಖರರಾವ್ ಅವರನ್ನು ಅಮಾನತ್ತಿನಲ್ಲಿಟ್ಟು, ಉನ್ನತಮಟ್ಟದ ತನಿಖೆ ನಡೆಸಬೇಕು ಎಂದು ಈ ದೂರಿನಲ್ಲಿ ಮನವಿ ಮಾಡಿದೆ.

ಎಂ.ಚಂದ್ರಶೇಖರ್ ಮೂಲತಃ ಹಿಮಾಚಲ ಪ್ರದೇಶ ಐ.ಪಿ.ಎಸ್ ಕೇಡರ್‌ಗೆ ಸೇರಿದವರಾಗಿದ್ದಾರೆ. ನಂತರ, ತನ್ನ ಪತ್ನಿಯ ಅನಾರೋಗ್ಯ ಮತ್ತು ಹಿಮಾಚಲ ಪ್ರದೇಶದ ವಾತಾವರಣ ಮತ್ತು ಹವಾಗುಣ ಹೊಂದುವುದಿಲ್ಲ ಎನ್ನುವ ಕುಂಟು ನೆಪ ಹೇಳಿ ಮತ್ತು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಹಾಗೂ ರಾಜಕೀಯ ಪ್ರಭಾವ ಬೀರಿ ಕರ್ನಾಟಕ ರಾಜ್ಯಕ್ಕೆ ವರ್ಗಾವಣೆಗೊಂಡು, ತದನಂತರ ಕರ್ನಾಟಕ ಐ.ಪಿ.ಎಸ್ ಕೇಡರ್‌ನಲ್ಲಿ ವಿಲೀನಗೊಂಡಿದ್ದಾರೆ ಎಂದು ದೂರಿನಲ್ಲಿ ಹೇಳಿದೆ.

ಎಂ.ಚಂದ್ರಶೇಖರ್ ವಿರುದ್ಧ ದಾಖಲಾಗಿರುವ ದೂರುಗಳು, ಎಫ್.ಐ.ಆರ್, ಕೋರ್ಟ್ ಪ್ರಕರಣಗಳು ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ದ ಅವಾಚ್ಯ, ಅಸಭ್ಯ ಮತ್ತು ಅವಹೇಳನಕಾರಿ ಪದಬಳಕೆ ಮಾಡಿ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ಪೊಲೀಸ್ ಸೇವೆಯಿಂದ ಅಮಾನತುಗೊಳಿಸಬೇಕು. ಜೊತಗೆ ಇವರ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಲು ಅಗತ್ಯವಿರುವ ದಾಖಲಾತಿಗಳೊಂದಿಗೆ ಭಾರತೀಯ ಪೊಲೀಸ್ ಸೇವೆಗಳ ವೃಂದದ ಪ್ರಾಧಿಕಾರವಾಗಿರುವ ಕೇಂದ್ರ ಗೃಹ ಮಂತ್ರಾಲಯಕ್ಕೆ ಪ್ರಸ್ತಾವನೆಯನ್ನು ಸೂಕ್ತ ಶಿಫಾರಸ್ಸಿನೊಂದಿಗೆ ಕಳುಹಿಸಬೇಕೆಂದು ಒತ್ತಾಯಿಸಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!