ಹೊಸದಿಗಂತ ವರದಿ, ಹುಬ್ಬಳ್ಳಿ:
ಹುಬ್ಬಳ್ಳಿ ಧಾರವಾಡ ನೂತನ ಪೊಲೀಸ್ ಆಯುಕ್ತರನ್ನಾಗಿ ಮಹಿಳಾ ಐಪಿಎಸ್ ಅಧಿಕಾರಿ ರೇಣುಕಾ ಸುಕುಮಾರ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಪ್ರಭಾರಿ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ ಬಾಬು ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಿ, 2011ರ ಐಪಿಎಸ್ ಬ್ಯಾಚ್ ನ ಅಧಿಕಾರಿಯಾಗಿರುವ ರೇಣುಕಾ ಅವರನ್ನು ನೇಮಕ ಮಾಡಲಾಗಿದೆ.
ರೇಣುಕಾ ಸುಕುಮಾರ ಅವರು ಗೃಹ ರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್ ಜನರಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆಯೂ ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿ ಆಗಿ ಸಹ ಕಾರ್ಯನಿರ್ವಹಿಸಿದ್ದರು.
ಹು-ಧಾ ಇತಿಹಾಸದಲ್ಲಿಯೇ ರೇಣುಕಾ ಸುಕುಮಾರ ಅವರು ಪ್ರಥಮ ಮಹಿಳಾ ಪೊಲೀಸ್ ಆಯುಕ್ತೆಯಾಗಿ ಆಯ್ಕೆಯಾಗಿದ್ದಾರೆ.