ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ CAT IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿದೆ. ಈ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿ ಅಮಾನತು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.
ಇಂದು ಸದಾಶಿವ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದು ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ಸಿಎಟಿ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು.