ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಅವರನ್ನು ಸೋಮವಾರ ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಹಿರಿಯ ಐಪಿಎಸ್ ಅಧಿಕಾರಿ ಡಿ ರೂಪಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಡಿ ರೂಪಾ ಅವರ ವಿರುದ್ಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲಿಖಿತ ದೂರು ನೀಡಿದ್ದ ವರ್ತಿಕಾ ಕಟಿಯಾರ್ ಅವರನ್ನು ಸೋಮವಾರ ವರ್ಗಾವಣೆ ಮಾಡಲಾಗಿತ್ತು. ಇದೀಗ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿದ್ದ ಡಿ ರೂಪಾ ಅವರನ್ನು ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
ವರ್ತಿಕಾ ಕಟಿಯಾರ್ ಅವರು ಐಪಿಎಸ್ ಅಧಿಕಾರಿ ಡಿ ರೂಪಾ ಅವರ ವಿರುದ್ಧ ತಮ್ಮ ಅನುಪಸ್ಥಿತಿಯಲ್ಲಿ ಇಬ್ಬರು ಕಿರಿಯ ಪೊಲೀಸ್ ಅಧಿಕಾರಿಗಳ ಮೂಲಕ ನಿಯಂತ್ರಣ ಕೊಠಡಿಯಿಂದ ಕೀ ತೆಗೆದುಕೊಂಡು ತಮ್ಮ ಕಚೇರಿ ಪ್ರವೇಶಿಸಿದ್ದಾರೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲಿಖಿತ ದೂರು ನೀಡಿದ್ದರು.
ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿತ್ತು. ಇದೀಗ ರೂಪ ಅವರನ್ನೂ ಸಹ ಸರ್ಕಾರ ವರ್ಗಾವಣೆ ಮಾಡಿದೆ.