Tuesday, March 21, 2023

Latest Posts

ಪ್ರಿಯಾಂಕಾ ಗಾಂಧಿ ಪಿಎ ಸಂದೀಪ್‌ ವಿರುದ್ಧ ಎಫ್ಐಆರ್ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಬಿಗ್ ಬಾಸ್ ಮಾಜಿ ಸ್ಪರ್ಧಿ ಮತ್ತು ಕಾಂಗ್ರೆಸ್ ನಾಯಕಿ ಅರ್ಚನಾ ಗೌತಮ್ ಅವರು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆಪ್ತ ಕಾರ್ಯದರ್ಶಿ ಸಂದೀಪ್‌ ಸಿಂಗ್ ತನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು‌ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಅರ್ಚನಾ ಗೌತಮ್ ಅವರ ತಂದೆ ಗೌತಮ್ ಬುದ್ಧ ಅವರು ಸಂದೀಪ್ ಸಿಂಗ್ ವಿರುದ್ಧ ಮೀರತ್‌ನ ಪರ್ತಾಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಂದೀಪ್ ಸಿಂಗ್ ತನ್ನ ಮಗಳಿಗೆ ಜಾತಿವಾದದ ಮಾತುಗಳನ್ನಾಡಿದ್ದಲ್ಲದೆ ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ.

ತಮ್ಮ ಮಗಳು ಅರ್ಚನಾ ಗೌತಮ್ ಅವರು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿ ಮಾಡಲು ಬಹಳ ಸಮಯದಿಂದ ಪ್ರಯತ್ನಿಸುತ್ತಿದ್ದಾರೆ. ಆದರೆ ಸಂದೀಪ್ ಸಿಂಗ್ ಅವರನ್ನು ಭೇಟಿ ಮಾಡಲು ಅವಕಾಶ ನೀಡುತ್ತಿಲ್ಲ ಎಂದು ಗೌತಮ್ ಬುದ್ಧ ಹೇಳಿದ್ದಾರೆ.

ಅರ್ಚನಾ ಗೌತಮ್ ಅವರ ತಂದೆ ನೀಡಿದ ದೂರಿನ ಮೇರೆಗೆ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿಎ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಿಯಾಂಕಾ ಗಾಂಧಿಯವರ ಆಹ್ವಾನದ ಮೇರೆಗೆ ಸಂದೀಪ್ ಸಿಂಗ್ ಅವರು ಫೆಬ್ರವರಿ 26 ರಂದು ಛತ್ತೀಸ್‌ಗಢದ ರಾಯ್‌ಪುರಕ್ಕೆ ಕಾಂಗ್ರೆಸ್ ಮಹಾಧಿವೇಶನದಲ್ಲಿ ಭಾಗವಹಿಸಲು ಅರ್ಚನಾ ಗೌತಮ್ ಅವರನ್ನು ಆಹ್ವಾನಿಸಿದ್ದರು. ಅವರ ಆಹ್ವಾನದ ಮೇರೆಗೆ ಅರ್ಚನಾ ಕಾರ್ಯಕ್ರಮಕ್ಕೆ ಹೋಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!