ಇರಾನ್ ವಾಯುಪಡೆ ಹೆಲಿಕಾಪ್ಟರ್ ಪತನ: ನಾಲ್ವರ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜನಸಂದಣಿ ತುಂಬಿದ್ದ ಮಾರುಕಟ್ಟೆ ಪ್ರದೇಶದಲ್ಲಿ ಆಕಸ್ಮಿಕವಾಗಿ ಹೆಲಿಕಾಪ್ಟರ್ ಪತನಗೊಂಡ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಮಧ್ಯ ಇರಾನ್‌ನ ಇಸ್ಫಹಾನ್ ಪ್ರಾಂತ್ಯದ ಡೋರ್ಚೆ ಪಟ್ಟಣದಲ್ಲಿ ನಡೆದಿದೆ. ತರಬೇತಿ ಹಾರಾಟ ನಡೆಸುತ್ತಿದ್ದ ಇರಾನ್ ವಾಯುಪಡೆಯ ಹೆಲಿಕಾಪ್ಟರ್ ನಿಯಂತ್ರಣ ತಪ್ಪಿ ಹಣ್ಣು-ತರಕಾರಿ ಮಾರುಕಟ್ಟೆ ಮೇಲೆ ಅಪ್ಪಳಿಸಿದೆ ಎಂದು ರಾಜ್ಯ ಮಾಧ್ಯಮಗಳು ವರದಿ ಮಾಡಿವೆ. ಪೈಲಟ್ ಮತ್ತು ಸಹ ಪೈಲಟ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾರುಕಟ್ಟೆ ಪ್ರದೇಶದಲ್ಲಿದ್ದ ಇಬ್ಬರು ನಾಗರಿಕರು ಕೂಡ ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಘಟನಾ … Continue reading ಇರಾನ್ ವಾಯುಪಡೆ ಹೆಲಿಕಾಪ್ಟರ್ ಪತನ: ನಾಲ್ವರ ದುರ್ಮರಣ