ಇರಾನ್ ನಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆ: 277 ಜನರ ಸಾವು, 14,000 ಜನರು ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಇರಾನ್ ನಲ್ಲಿ ಹಿಜಾಬ್ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕಳೆದ ಆರು ವಾರಗಳಲ್ಲಿ 14,000 ಮಂದಿಯನ್ನು ಬಂಧಿಸಲಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ.
“ಕಳೆದ ಆರು ವಾರಗಳಲ್ಲಿ, ಸಾವಿರಾರು ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 14,000 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಇದರಲ್ಲಿ ಮಾನವ ಹಕ್ಕುಗಳ ರಕ್ಷಕರು, ವಿದ್ಯಾರ್ಥಿಗಳು, ವಕೀಲರು, ಪತ್ರಕರ್ತರು ಮತ್ತು ನಾಗರಿಕ ಸಮಾಜದ ಕಾರ್ಯಕರ್ತರು ಸೇರಿದ್ದಾರೆ” ಎಂದು ವಿಶ್ವಸಂಸ್ಥೆಯ ವಿಶೇಷ ವರದಿಗಾರ ಜಾವೈದ್ ರೆಹಮಾನ್ ಹೇಳಿದ್ದಾರೆ. ಹಿಜಾಬ್‌ ಧರಿಸಿಲ್ಲವೆಂಬ ಕಾರಣಕ್ಕೆ ನೈತಿಕ ಪೊಲೀಸರಿಂದ ಬಂಧನಕ್ಕೊಳಗಾಗಿ ಥಳಿತದಿಂದ ಸಾವನ್ನಪ್ಪಿದ 22 ವರ್ಷದ ಮಹ್ಸಾ ಅಮಿನಿಯ ಮರಣದ ಬಳಿಕ ಇಸ್ಲಾಮಿಕ್ ರಿಪಬ್ಲಿಕ್‌ ರಾಷ್ಟ್ರ ಇರಾನ್‌ ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.
ದೇಶದಲ್ಲಿ ಭದ್ರತಾ ಪಡೆಗಳ ವಿರುದ್ಧ ಸಾಗುತ್ತಿರುವ ಹಿಂಸಾತ್ಮಕ ಪ್ರತಿಭಟನೆ ಕನಿಷ್ಠ 277 ಜನರ ಸಾವಿಗೆ ಕಾರಣವಾಗಿದೆ ಎಂದು ವಿಶ್ವಸಂಸ್ಥೆಯ ಮೂಲಗಳು ಹೇಳಿದೆ. ಕೆಲವರಿಗೆ ಮರಣದಂಡನೆಯನ್ನು ವಿಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!