Sunday, February 5, 2023

Latest Posts

ಇರಾನ್‌ ಹಿಜಾಬ್ ವಿರೋಧಿ ಪ್ರತಿಭಟನೆ: ಮತ್ತೆ ಮೂವರಿಗೆ ಗಲ್ಲು, ಶಿಕ್ಷೆಯಿಂದ ಸಾವನ್ನಪ್ಪಿದವರ ಸಂಖ್ಯೆ 17ಕ್ಕೇರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ರಾಷ್ಟ್ರವ್ಯಾಪಿ ಹಿಜಾಬ್ ವಿರೋಧಿ ಪ್ರತಿಭಟನೆಗಳ ನಡುವೆ ಭದ್ರತಾ ಪಡೆಗಳ ಮೂವರು ಸದಸ್ಯರನ್ನು ಕೊಂದ ಆರೋಪದಲ್ಲಿ ಇರಾನ್ ಮೂವರಿಗೆ ಮರಣದಂಡನೆ ವಿಧಿಸಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮಹ್ಸಾ ಅಮಿನಿಯ ಮರಣದ ನಂತರ ಇರಾನ್ ಬೃಹತ್ ಹಿಜಾಬ್‌ ವಿರೋಧಿ ಹೋರಾಟಕ್ಕೆ ಸಾಕ್ಷಿಯಾಗಿದೆ.

ಅಲ್ಲಿಂದೀಚೆ ಸೆಲೆಬ್ರಿಟಿಗಳೂ ಸೇರಿದಂತೆ ಹಿಜಾಬ್‌ ವಿರೋಧಿ ಪ್ರತಿಭಟನೆಗಳನ್ನು ನಡೆಸುತ್ತಿರುವವರನ್ನು ಇರಾನ್‌ ಸರ್ಕಾರ ಬಂಧಿಸುತ್ತಿದೆ. ಪ್ರತಿಭಟನಾಕಾರರನ್ನು ನಿರ್ದಾಕ್ಷಿಣ್ಯವಾಗಿ ಹತ್ತಿಕ್ಕಲಾಗುತ್ತಿದೆ. ಪ್ರತಿಭಟನಾಕಾರರ ಮೇಲೆ ಭದ್ರತಾಪಡೆಗಳು ಅಮಾನುಷ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಚಲನಚಿತ್ರ ತಾರೆಯರೂ ಸೇರಿದಂತೆ ಹಿಜಾಬ್‌ ವಿರೋಧದ ಪರವಾಗಿ ಧ್ವನಿ ಎತ್ತಿದವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ನಿನ್ನೆಯಷ್ಟೇ ಇಬ್ಬರಿಗೆ ಗಲ್ಲು ಶಿಕ್ಷೆ ವಿಧಿಸಿರುವುದಾಗಿ ವರದಿಗಳಾಗಿದ್ದವು. ಇದೀಗ ಮತ್ತೆ ಮೂವರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಇದರೊಂದಿಗೆ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಮರಣದಂಡನೆಗೆ ಒಳಗಾದವರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ.

“ದೇವರ ವಿರುದ್ಧ ಯುದ್ಧ” ನಡೆಸಿದ ಆರೋಪದ ಮೇಲೆ ಮರಣದಂಡನೆ ವಿಧಿಸಲಾಗಿದೆ ಎಂದು ನ್ಯಾಯಾಂಗದ ಮಿಜಾನ್ ಆನ್‌ಲೈನ್ ಸುದ್ದಿ ವೆಬ್‌ಸೈಟ್ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!