August 24, 2026
Monday, August 24, 2026
spot_img

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ: ನಾಲ್ವರಿಗೆ ಗಾಯ, ಹೆಚ್ಚಿದ ಉದ್ವಿಗ್ನತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ನಡುವೆಯೇ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಹೊಸ ತಿರುವು ಪಡೆದಿದೆ. ಇಸ್ರೇಲ್ ಮತ್ತು ಅಮೆರಿಕ ಸಂಯುಕ್ತ ದಾಳಿಯ ನಂತರ ಇರಾನ್ ಪ್ರತಿದಾಳಿಗೆ ಮುಂದಾಗಿದ್ದು, ಗಲ್ಫ್ ಪ್ರದೇಶದಲ್ಲಿರುವ ಅಮೆರಿಕದ ಸೈನಿಕ ತಾಣಗಳನ್ನು ಗುರಿಯಾಗಿಸಿಕೊಂಡು ಕ್ರಮ ಕೈಗೊಂಡಿದೆ ಎಂದು ವರದಿಗಳು ಸೂಚಿಸಿವೆ.

ಇದೀಗ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ದಾಳಿ ನಡೆದಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಿದಾಡುತ್ತಿದೆ. ಸ್ಫೋಟದ ಶಬ್ದ ಕೇಳಿಬಂದಿರುವ ದೃಶ್ಯಗಳು ಮತ್ತು ದಟ್ಟ ಹೊಗೆ ಕಾಣಿಸಿಕೊಂಡಿರುವ ವಿಡಿಯೋಗಳು ವೈರಲ್ ಆಗಿವೆ.

ಇದನ್ನೂ ಓದಿ:

ಘಟನೆಯಲ್ಲಿ ನಾಲ್ವರು ಗಾಯಗೊಂಡಿರುವ ಸಾಧ್ಯತೆ ಬಗ್ಗೆ ಪ್ರಾಥಮಿಕ ವರದಿಗಳು ಹೇಳುತ್ತಿವೆ. ಆದರೆ ವಿಮಾನ ನಿಲ್ದಾಣವನ್ನು ನೇರವಾಗಿ ಗುರಿಯಾಗಿಸಿಕೊಂಡ ದಾಳಿ ನಡೆದಿದೆ ಎಂಬುದನ್ನು ಸಂಬಂಧಿತ ಅಧಿಕಾರಿಗಳು ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ.

ದಾಳಿಯ ನಂತರ ಪ್ರಯಾಣಿಕರ ಲಾಂಜ್ ಭಾಗಕ್ಕೆ ಹಾನಿಯಾಗಿರುವ ಸಾಧ್ಯತೆ ವ್ಯಕ್ತವಾಗಿದೆ. ಘಟನೆ ಬಳಿಕ ಯುನೈಟೆಡ್ ಅರಬ್ ಎಮಿರೇಟ್ಸ್‌ನ ವಿವಿಧ ಪ್ರದೇಶಗಳಲ್ಲಿ ತುರ್ತು ಎಚ್ಚರಿಕೆ ಜಾರಿಗೊಳಿಸಲಾಗಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಕ್ಷಿಪಣಿ ದಾಳಿ ಭೀತಿಯ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !