ಇಸ್ರೇಲ್ ಮೇಲೆ ಇರಾನ್ ದಾಳಿ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ತುರ್ತು ಸಂದೇಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಸ್ರೇಲ್ ಮೇಲೆ ಇರಾನ್ ಡ್ರೋನ್ ಮತ್ತು ಕ್ಷಿಪಣಿ ದಾಳಿಯನ್ನು ಪ್ರಾರಂಭಿಸಿದ್ದು, ಹೀಗಾಗಿ ಯುದ್ಧದ ಭೀತಿಯಲ್ಲಿರುವ ಭಾರತೀಯ ನಾಗರಿಕರಿಗೆ ಇಸ್ರೇಲ್‌ನಲ್ಲಿರುವ (Israel) ಭಾರತೀಯ ರಾಯಭಾರಿ (Indian Embassy) ಕಚೇರಿಯು ಭಾನುವಾರ ಸುರಕ್ಷತಾ ಮಾರ್ಗಸೂಚಿ ಬಿಡುಗಡೆ.

ಭಾರತೀಯ ನಾಗರಿಕರು ಶಾಂತವಾಗಿರಿ. ಇಸ್ರೇಲ್‌ನ ಸ್ಥಳೀಯ ಅಧಿಕಾರಿಗಳು ನೀಡಿರುವ ಸುರಕ್ಷತಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿ ಎಂದು ಭಾರತೀಯ ರಾಯಭಾರಿ ಕಚೇರಿ ಸಲಹೆ ನೀಡಿದೆ.

ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಮ್ಮ ಎಲ್ಲಾ ಪ್ರಜೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇಸ್ರೇಲಿ ಅಧಿಕಾರಿಗಳು ಮತ್ತು ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂಪರ್ಕದಲ್ಲಿದೆ ಎಂದು ಅದು ಹೇಳಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯವು(MEA) ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಹಿಂಸಾಚಾರದಿಂದ ದೂರವಿರಲು ಮತ್ತು ರಾಜತಾಂತ್ರಿಕ ಸಮಾಲೋಚನೆಗಳನ್ನು ಪುನರಾರಂಭಿಸಲು ಎರಡೂ ಕಡೆಯವರನ್ನು ಒತ್ತಾಯಿಸಿದೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನದ ಉಲ್ಬಣವು ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗೆ ಬೆದರಿಕೆ ಹಾಕುವ ಬಗ್ಗೆ ನಾವು ಗಂಭೀರವಾಗಿ ಚಿಂತಿಸುತ್ತಿದ್ದೇವೆ. ನಾವು ಹಗೆತನವನ್ನು ತಕ್ಷಣವೇ ಕೊನೆಗೊಳಿಸಬೇಕು, ವಿವೇಕದ ಬಳಕೆ, ಆಕ್ರಮಣಶೀಲತೆಯಿಂದ ಹಿಮ್ಮೆಟ್ಟುವಿಕೆ ಮತ್ತು ರಾಜತಾಂತ್ರಿಕ ಸಂಬಂಧಗಳನ್ನು ಮರುಸ್ಥಾಪಿಸಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಇಸ್ರೇಲ್‌ ಮೇಲೆ ಇರಾನ್‌ (Iran) 100 ಕ್ಕೂ ಹೆಚ್ಚು ಡ್ರೋನ್‌ಗಳ ದಾಳಿ ನಡೆಸಿದ್ದು, ಪರಿಸ್ಥಿತಿ ಕ್ಷಣಕ್ಷಣಕ್ಕೂ ಹದಗೆಡುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕರ ಸುರಕ್ಷತೆಗೆ ಕಚೇರಿ ಮಾರ್ಗಸೂಚಿ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!