ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುನೈಟೆಡ್ ಅರಬ್ ಎಮಿರೇಟ್ಸ್‌ನ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇಂದು ಇರಾನ್ ಡ್ರೋನ್ ದಾಳಿ ನಡೆದಿದ್ದು, ವಿಮಾನಗಳು ಹಾರಾಟ ಸ್ಥಗಿತಗೊಂಡಿವೆ. ಇದರಿಂದ ನಿಲ್ದಾಣದಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿದೆ. ದಾಳಿಯ ಸ್ಥಳದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡು, ಸದ್ಯದವರೆಗೆ ಯಾವುದೇ ಹಾನಿ ಅಥವಾ ಸಾವು-ನೋವಿನ ವರದಿ ಲಭ್ಯವಾಗಿಲ್ಲ.
ಎಮಿರೇಟ್ಸ್ ಸರ್ಕಾರವು ಮುಂದಿನ ಸೂಚನೆ ಬರುವವರೆಗೆ ದುಬೈಗೆ ಆಗಮಿಸುವ ಹಾಗೂ ಹೊರಡುವ ಎಲ್ಲಾ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಫೆಬ್ರವರಿ 28 ರಿಂದ ಮಾರ್ಚ್ 31 ರವರೆಗೆ ಪ್ರಯಾಣ ಬುಕ್ ಮಾಡಿದ ಪ್ರಯಾಣಿಕರಿಗೆ ಮರುಬುಕಿಂಗ್ ಅಥವಾ ಹಣ ಮರುಪಾವತಿ ಆಯ್ಕೆಗಳನ್ನು ನೀಡಲಾಗಿದೆ.
ಇದನ್ನೂ ಓದಿ:
ಇರಾನ್ ಈ ರೀತಿಯ ದಾಳಿಗಳನ್ನು ಮಧ್ಯಪ್ರಾಚ್ಯದಲ್ಲಿ ಅಮೆರಿಕದ ಸೈನಿಕ ನೆಲೆಗಳ ಮೇಲೆ ನಡೆಯುತ್ತಿರುವ ಒತ್ತಡಕ್ಕೆ ಪ್ರತಿಕ್ರಿಯೆಯಾಗಿ ನಡೆಸುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಅಮೆರಿಕ ತನ್ನ ನೆಲೆಗಳನ್ನು ಬಳಸಿಕೊಂಡು ಇರಾನ್ ಮೇಲೆ ದಾಳಿ ಮಾಡುತ್ತಿದೆ ಎಂಬ ಆರೋಪದ ಹಿನ್ನೆಲೆ ಈ ದಾಳಿ ನಡೆದಂತೆ ತಿಳಿಸಲಾಗಿದೆ. ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದ್ದು, ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ.



