ಇರಾಕ್ ಮೇಲೆ ಇರಾನ್ ಡ್ರೋನ್ ದಾಳಿ, ಗರ್ಭಿಣಿ ಸೇರಿ 13 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಇರಾಕ್‌ನ ಕುರ್ದಿಸ್ತಾನ್ ಪ್ರದೇಶದಲ್ಲಿ ಇರಾನ್ ಪಡೆಗಳು ಡ್ರೋನ್ ದಾಳಿ ನಡೆಸಿದ್ದು, ಗರ್ಭಿಣಿ ಸೇರಿ 13 ಮಂದಿ ಮೃತಪಟ್ಟಿದ್ದಾರೆ.
ಖಂಡಾಂತರ ಕ್ಷಿಪಣಿ ಹಾಗೂ ಡ್ರೋನ್‌ಗಳನ್ನು ಬಳಸಿ, ನಾಲ್ಕು ಹಂತದಲ್ಲಿ ಇರಾನ್ ಪಡೆಗಳು ಬಾಂಬ್ ದಾಳಿ ನಡೆಸಿದೆ. ಈ ದಾಳಿಯಲ್ಲಿ 58 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕುರ್ದಿಶ್ ವಿರೋಧ ಪಕ್ಷಗಳ ಪ್ರಧಾನ ಕಚೇರಿಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದು, 13 ನಾಗರಿಕರು ಪ್ರಾಣಬಿಟ್ಟಿದ್ದಾರೆ.
ಈ ಬಗ್ಗೆ ಇರಾಕ್ ವಿದೇಶಾಂಗ ಸಚಿವಾಲಯ ಮಾತನಾಡಿದ್ದು, ಕುರ್ದಿಸ್ತಾನ್‌ನ ನಾಲ್ಕು ಪ್ರದೇಶಗಳನ್ನು ಇರಾನ್ ಗುರಿಯಾಗಿಸಿತ್ತು. ಈ ದಾಳಿಯಿಂದ ಅಮಾಯಕರು ಮೃತಪಟ್ಟಿದ್ದಾರೆ ಇದನ್ನು ಖಂಡಿಸುತ್ತೇವೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!