ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರೊಂದಿಗೆ ಮಾತುಕತೆ ನಡೆಸಿದರು. ಇಬ್ಬರೂ ನಾಯಕರು ದೂರವಾಣಿ ಸಂಭಾಷಣೆಯಲ್ಲಿ, ಪಶ್ಚಿಮ ಏಷ್ಯಾ ಪ್ರದೇಶದ ‘ಕಷ್ಟಕರ ಪರಿಸ್ಥಿತಿ’ ಮತ್ತು ಇಸ್ರೇಲ್-ಹಮಾಸ್ ಸಂಘರ್ಷದ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ಇನ್ನು ಉದ್ವಿಗ್ನತೆ ಕಡಿಮೆ ಮಾಡುವ, ಮಾನವೀಯ ನೆರವು ಮುಂದುವರಿಸುವ ಮತ್ತು ಶಾಂತಿ ಮತ್ತು ಭದ್ರತೆಯನ್ನು ಶೀಘ್ರ ಪುನಃಸ್ಥಾಪಿಸುವ ಅಗತ್ಯವನ್ನು ಹೇಳಿದರು.
ಈ ಪ್ರದೇಶದಲ್ಲಿ ನಡೆದ “ಭಯೋತ್ಪಾದಕ ಘಟನೆಗಳು, ಹಿಂಸಾಚಾರ ಮತ್ತು ನಾಗರಿಕರ ಪ್ರಾಣಹಾನಿ” ಬಗ್ಗೆ ಪ್ರಧಾನಿ ಮೋದಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದರು. ಇಸ್ರೇಲ್-ಪ್ಯಾಲೆಸ್ಟೈನ್ ವಿಷಯದ ಬಗ್ಗೆ ಭಾರತದ ದೀರ್ಘಕಾಲದ ಮತ್ತು ಸ್ಥಿರ ನಿಲುವನ್ನು ಪುನರುಚ್ಚರಿಸಿದರು. ಏತನ್ಮಧ್ಯೆ, ಇರಾನ್ ಅಧ್ಯಕ್ಷರು ಪರಿಸ್ಥಿತಿಯ ಬಗ್ಗೆ ತಮ್ಮ ಮೌಲ್ಯಮಾಪನವನ್ನು ಹಂಚಿಕೊಂಡರು.
Good exchange of perspectives with President @raisi_com of Iran on the difficult situation in West Asia and the Israel-Hamas conflict. Terrorist incidents, violence and loss of civilian lives are serious concerns. Preventing escalation, ensuring continued humanitarian aid and…
— Narendra Modi (@narendramodi) November 6, 2023