7ನೇ ದಿನಕ್ಕೆ ಕಾಲಿಟ್ಟ ಇರಾನ್ -ಇಸ್ರೇಲ್ ಸಂಘರ್ಷ: ಇಸ್ರೇಲ್‌ನ ಅತಿದೊಡ್ಡ ಆಸ್ಪತ್ರೆ ಧ್ವಂಸ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ 7ನೇ ದಿನಕ್ಕೆ ಕಾಲಿಟ್ಟಿದ್ದು, ಉಭಯ ರಾಷ್ಟ್ರಗಳ ನಡುವಿನ ಪರಸ್ಪರ ಮಿಸೈಲ್‌ ದಾಳಿ (Missile Strike) ಮುಂದುವರಿದಿದೆ. ಇರಾನ್‌ ಟೆಲ್‌ ಅವಿವ್‌ ಮೇಲೆ ನಡೆಸಿದ ಇತ್ತೀಚಿನ ಕ್ಷಿಪಣಿ ದಾಳಿಯಲ್ಲಿ ಕನಿಷ್ಠ ಮೂವರು ಇಸ್ರೇಲಿಯನ್ನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇಸ್ರೇಲ್‌ ಇರಾನಿನ ಅಣ್ವಸ್ತ್ರ ಘಟಕ ಪ್ರದೇಶದಲ್ಲಿರುವ ನೀರಿನ ಸೌಲಭ್ಯಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ರೆ, ಇರಾನ್‌, ಇಸ್ರೇಲಿನ ಆಸ್ಪತ್ರೆಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ. ಈ ನಡುವೆ ಇಸ್ರೇಲ್‌ನಾದ್ಯಂತ ಸೈರನ್‌ಗಳು ಮೊಳಗಿದ್ದು, ಸಾರ್ವಜನಿಕರನ್ನು ಸುರಕ್ಷಿತ ಸ್ಥಳಗಳಿಗೆ ರವಾನೆ ಮಾಡಲಾಗಿದೆ.

7ನೇ ದಿನ ಇರಾನ್‌ ನಡೆಸಿದ ಖಂಡಾಂತರ ಕ್ಷಿಪಣಿ ದಾಳಿಗೆ ದಕ್ಷಿಣ ಇಸ್ರೇಲ್‌ನ ಅತಿದೊಡ್ಡ ಆಸ್ಪತ್ರೆ ʻಬೀರ್‌ಶೆಬಾದಲ್ಲಿರುವ ಸೊರೊಕಾʼ ಧ್ವಂಸವಾಗಿದೆ. ಇದರಲ್ಲಿ ಸಾವುನೋವಿನ ಪ್ರಮಾಣ ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!