July 30, 2026
Thursday, July 30, 2026
spot_img

ಇರಾನ್-ಇಸ್ರೇಲ್ ಯುದ್ಧದ ಕಾರ್ಮೋಡ: ಮಧ್ಯಪ್ರಾಚ್ಯ ದೇಶಗಳಿಗೆ ಏರ್ ಇಂಡಿಯಾ ವಿಮಾನಗಳ ಹಾರಾಟ ರದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್ ಮೇಲೆ ಇಸ್ರೇಲ್ ಮತ್ತೆ ಕ್ಷಿಪಣಿ ದಾಳಿ ನಡೆಸಿದ್ದು, ಇದರ ಬೆನ್ನೆಲ್ಲೆ ಮಧ್ಯಪ್ರಾಚ್ಯ ಉದ್ವಿಗ್ನಗೊಂಡಿದ್ದು, ಇಸ್ರೇಲ್ ತನ್ನ ವಾಯುಪ್ರದೇಶ ಬಂದ್ ಮಾಡಿದೆ. ಹೀಗಾಗಿ ಏರ್ ಇಂಡಿಯಾ ಶನಿವಾರ ತನ್ನ ದೆಹಲಿ-ಟೆಲ್ ಅವೀವ್ ವಿಮಾನವನ್ನು ಮುಂಬೈಗೆ ಡೈವರ್ಟ್ ಮಾಡಿದೆ.

ಇಸ್ರೇಲ್‌ನಲ್ಲಿ ವಾಯುಪ್ರದೇಶ ಮುಚ್ಚಿರುವುದರಿಂದ ಮತ್ತು ಪ್ರಯಾಣಿಕರು ಹಾಗೂ ಸಿಬ್ಬಂದಿಯ ಸುರಕ್ಷತೆಯ ಹಿತದೃಷ್ಟಿಯಿಂದ ಫೆಬ್ರವರಿ 28 ರಂದು ದೆಹಲಿಯಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ AI139 ವಿಮಾನ ಭಾರತಕ್ಕೆ ಮರಳುತ್ತಿದೆ ಎಂದು ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಅನಿರೀಕ್ಷಿತ ಪರಿಸ್ಥಿತಿಯಿಂದಾಗಿ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಮಾನಯಾನ ಸಂಸ್ಥೆ ವಿಷಾದ ವ್ಯಕ್ತಪಡಿಸಿದೆ. ಏತನ್ಮಧ್ಯೆ, ಇರಾನ್ ಮತ್ತು ಅದರ ವಾಯುಪ್ರದೇಶಕ್ಕೆ ಸಂಬಂಧಿಸಿದ ಪ್ರಾದೇಶಿಕ ನವೀಕರಣಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಇಂಡಿಗೋ ಹೇಳಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !