ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ: ದೆಹಲಿಯ ರಾಯಭಾರ ಕಚೇರಿಯಲ್ಲಿ ಭದ್ರತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಇದರ ಬೆನ್ನಲ್ಲೇ ಇತ್ತ ದೆಹಲಿಯ ಇಸ್ರೇಲ್ ರಾಯಭಾರ ಕಚೇರಿಯ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇರಾನ್, ಇಸ್ರೇಲ್ ಮೇಲೆ 181 ಕ್ಷಿಪಣಿಗಳ ದಾಳಿ ಮಾಡಿದ ನಂತರ ಈ ಕ್ರಮಕೈಗೊಳ್ಳಲಾಗಿದೆ. ಕಚೇರಿಯ ಸುತ್ತಮುತ್ತ ಪೊಲೀಸರ ಗಸ್ತು ಹೆಚ್ಚಿಸಲಾಗಿದೆ. ಕಚೇರಿಯಲ್ಲೂ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.

2021 ಮತ್ತು 2023 ರಲ್ಲಿ ರಾಯಭಾರ ಕಚೇರಿ ಬಳಿ ಶಂಕಿತ ಸ್ಫೋಟಗಳು ಸಂಭವಿಸಿದ್ದವು.

ಮಂಗಳವಾರ ತಡರಾತ್ರಿ ಮಧ್ಯ ಇಸ್ರೇಲ್‍ನ ಟೆಲ್ ಅವಿವ್‍ನ ಜಾಫಾ ಪಟ್ಟಣದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದರು.ಈ ಇಬ್ಬರು ದಾಳಿಕೋರರು ಮನ ಬಂದಂತೆ ಗುಂಡು ಹಾರಿಸಿದ್ದಾರೆ. ಇಬ್ಬರನ್ನು ಭದ್ರತಾ ಪಡೆ ಹತ್ಯೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!