Tuesday, July 5, 2022

Latest Posts

ಇರಾನ್ ಹಳಿ ತಪ್ಪಿದ ಪ್ಯಾಸೆಂಜರ್‌ ರೈಲು: 17 ಜನರು ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್‌

ಇರಾನ್ʼನ ತಬಾಸ್ ಬಳಿ ಪ್ಯಾಸೆಂಜರ್‌ ರೈಲು ಹಳಿ ತಪ್ಪಿದೆ. ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇನ್ನು ಗಾಯಗೊಂಡವರಲ್ಲಿ 16 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಟೆಹ್ರಾನ್ʼನಿಂದ ಸುಮಾರು 550 ಕಿಲೋಮೀಟರ್ ದೂರದಲ್ಲಿ ಈ ಅಪಘಾತ ಸಂಭವಿಸಿದ್ದು, ಅಧಿಕಾರಿಗಳ ಪ್ರಕಾರ, 350 ಜನರು ರೈಲಿನಲ್ಲಿ ಪ್ರಯಾಣಿಸುತ್ತಿದ್ದರು.ಸದ್ಯ ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನ ಪ್ರಾರಂಭಿಸಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss