ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್‌ನಲ್ಲಿ ಸರ್ಕಾರ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, 13 ದಿನಗಳಾದರೂ ಉದ್ವಿಗ್ನತೆ ತಣ್ಣಗಾಗಿಲ್ಲ. ಭದ್ರತಾ ಪಡೆಗಳು ಪ್ರತಿಭಟನಾಕಾರರ ಮೇಲೆ ನಡೆಸಿದ ಗುಂಡಿನ ದಾಳಿಯಿಂದ ಪರಿಸ್ಥಿತಿ ಮತ್ತಷ್ಟು ಭೀಕರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುತ್ತಿರುವ ವರದಿಗಳು ಹೊರಬರುತ್ತಿವೆ.
ಸ್ಥಳೀಯ ವೈದ್ಯಕೀಯ ಮೂಲಗಳ ಪ್ರಕಾರ, ರಾಜಧಾನಿ ಟೆಹ್ರಾನ್‌ನ ವಿವಿಧ ಆಸ್ಪತ್ರೆಗಳಲ್ಲಿ ಕನಿಷ್ಠ 200ಕ್ಕೂ ಹೆಚ್ಚು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ. ಗುಂಡಿನ ದಾಳಿಯೇ ಹೆಚ್ಚಿನ ಸಾವುಗಳಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ. ಉತ್ತರ ಟೆಹ್ರಾನ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಭದ್ರತಾ ಪಡೆಗಳು ಏಕಾಏಕಿ ಗುಂಡಿನ ಮಳೆ ಸುರಿಸಿದ್ದು, 30ಕ್ಕೂ ಹೆಚ್ಚು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: FOOD | ಸಿಂಪಲ್ ಆಂಡ್ ಟೇಸ್ಟಿ ಸ್ನ್ಯಾಕ್ ಬೇಕಾ? ಹಾಗಿದ್ರೆ ಈ ಆಲೂ ಚಾಟ್ ರೆಸಿಪಿ ಟ್ರೈ ಮಾಡಿ
ಪ್ರತಿಭಟನೆ ವ್ಯಾಪಕವಾಗುತ್ತಿದ್ದಂತೆ, ಸರ್ಕಾರ ದೇಶಾದ್ಯಂತ ಇಂಟರ್ನೆಟ್ ಮತ್ತು ದೂರವಾಣಿ ಸಂಪರ್ಕವನ್ನು ಸ್ಥಗಿತಗೊಳಿಸಿದೆ. 2025ರ ಡಿಸೆಂಬರ್ 28ರಂದು ಆರಂಭವಾದ ಈ ಹೋರಾಟ, ಇಸ್ಲಾಮಿಕ್ ಗಣರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಆಡಳಿತ ವಿರೋಧಿ ಚಳವಳಿಯಾಗಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.

