IRANI CUP | ಇರಾನಿ ಕಪ್ ಪಂದ್ಯ ಮುಂಬೈನಿಂದ ಶಿಫ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಂದ್ಯವನ್ನು ಮುಂಬೈನಿಂದ ಸ್ಥಳಾಂತರಿಸಲು ಬಿಸಿಸಿಐ ನಿರ್ಧರಿಸಿದೆ. ಪ್ರತಿಕೂಲ ಹವಾಮಾನದ ಕಾರಣದಿಂದ ಈ ಪಂದ್ಯವನ್ನು ವಾಂಖೆಡೆ ಸ್ಟೇಡಿಯಂ ಬದಲು ಇತರೆ ನಗರದ ಕ್ರೀಡಾಂಗಣದಲ್ಲಿ ಆಯೋಜಿಸಲು ಚಿಂತಿಸಲಾಗಿದೆ. ಅದರಂತೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಅಥವಾ ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ಇರಾನಿ ಕಪ್ ಪಂದ್ಯ ನಡೆಯುವ ಸಾಧ್ಯತೆಯಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2024-25ರ ದೇಶೀಯ ಕ್ರಿಕೆಟ್ ವೇಳಾಪಟ್ಟಿಯ ಪ್ರಕಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇರಾನಿ ಕಪ್ ಪಂದ್ಯ ನಡೆಯಬೇಕಿತ್ತು. ಆದರೆ ಅಕ್ಟೋಬರ್ ತಿಂಗಳಲ್ಲಿ ನಗರವು ವಿಸ್ತೃತ ಮಾನ್ಸೂನ್ ಅವಧಿಯನ್ನು ಎದುರಿಸುತ್ತಿರುವುದರಿಂದ, ಐದು ದಿನಗಳ ನಿರ್ಣಾಯಕ ಪಂದ್ಯವನ್ನು ಆಯೋಜಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಪಂದ್ಯವನ್ನು ಸ್ಥಳಾಂತರಿಸಲು ನಿರ್ಧರಿಸಲಾಗಿದೆ.

ಇರಾನಿ ಕಪ್ ಪಂದ್ಯದಲ್ಲಿ ಹಾಲಿ ರಣಜಿ ಟ್ರೋಫಿ ಚಾಂಪಿಯನ್ಸ್ ಹಾಗೂ ಶೇಷ ಭಾರತ ತಂಡ (ರೆಸ್ಟ್ ಆಫ್ ಇಂಡಿಯಾ) ಮುಖಾಮುಖಿಯಾಗಲಿದೆ. ಕಳೆದ ಬಾರಿ ಅಜಿಂಕ್ಯ ರಹಾನೆ ನೇತೃತ್ವದ ಮುಂಬೈ ತಂಡವು ವಿದರ್ಭ ತಂಡವನ್ನು 169 ರನ್‌ಗಳಿಂದ ಸೋಲಿಸಿ 42ನೇ ರಣಜಿ ಟ್ರೋಫಿಯನ್ನು ಎತ್ತಿ ಹಿಡಿದಿತ್ತು. ಹೀಗಾಗಿ ಈ ಬಾರಿಯ ಇರಾನಿ ಕಪ್ ಪಂದ್ಯದಲ್ಲಿ ಮುಂಬೈ ಕಣಕ್ಕಿಳಿಯಲಿದೆ.

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!