April 13, 2026
Monday, April 13, 2026
spot_img

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ: ಭಾರತೀಯ ಸಹಿತ ನಾಲ್ವರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನ್ ಎರಡು ಡ್ರೋನ್‌ಗಳನ್ನು ಸ್ಫೋಟಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಈ ದಾಳಿಯಲ್ಲಿ ಇಬ್ಬರು ಘಾನಾ ಪ್ರಜೆಗಳು, ಓರ್ವ ಬಾಂಗ್ಲಾದೇಶಿ ಪ್ರಜೆ ಮತ್ತು ಒಬ್ಬ ಭಾರತೀಯ ಪ್ರಜೆ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದು, ಅದಾಗ್ಯೂ ವಿಮಾನ ಸಂಚಾರ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ ಎಂದು ದುಬೈ ಸರ್ಕಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಇರಾನ್​ ಗಲ್ಫ್​ ರಾಷ್ಟ್ರಗಳ ವಿಮಾನ ನಿಲ್ದಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ಮುಂದುವರೆಸಿದೆ.ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ವಿಮಾನಗಳ ವೇಳಾಪಟ್ಟಿಗಳನ್ನು ಮತ್ತೆ ಮರು ಹೊಂದಾಣಿಕೆ ಮಾಡಲು ಹರಸಾಹಸ ಪಡುವಂತಾಗಿದೆ.

ಇರಾನ್​ ಮೇಲೆ ಅಮೆರಿಕ ಮತ್ತು ಇಸ್ರೇಲ್​ ವೈಮಾನಿಕ ದಾಳಿ ಬಳಿಕ ಉಲ್ಬಣಗೊಂಡ ಯುದ್ದವು ಜಾಗತಿಕ ಇಂಧನದ ಕೊರತೆಯ ಆತಂಕ ಹೆಚ್ಚಿಸಿದೆ. ಈ ನಡುವೆ ಇರಾನ್ ಪರ್ಷಿಯನ್ ಕೊಲ್ಲಿಯಾದ್ಯಂತ ವಾಣಿಜ್ಯ ಹಡಗುಗಳ ಮೇಲೆ ದಾಳಿ ಮುಂದುವರಿಸಿದೆ.

ಇದರ ನಡುವೆ ಮಧ್ಯಪ್ರಾಚ್ಯದಲ್ಲಿರುವ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವುದಾಗಿ ಇರಾನ್‌ನ ಜಂಟಿ ಮಿಲಿಟರಿ ಕಮಾಂಡ್ ಘೋಷಿಸಿದೆ. ಇದು ದುಬೈಗೆ ಆಘಾತವನ್ನುಂಟು ಮಾಡಿದೆ.

ಇದಕ್ಕೂ ಮೊದಲು ಓಮನ್ ಕರಾವಳಿ ಹಾರ್ಮುಜ್ ಜಲಸಂಧಿಯಲ್ಲಿ ಒಂದು ಕಂಟೇನರ್ ಹಡಗನ್ನು ಹೊಡೆದುರುಳಿಸಲಾಗಿದೆ ಎಂದು ಬ್ರಿಟಿಷ್ ಮಿಲಿಟರಿ ತಿಳಿಸಿದೆ. ಇರಾನಿನ ಎಂಟು ಡ್ರೋನ್‌ಗಳನ್ನು ಹೊಡೆದುರುಳಿಸಿದಾಗಿ ಕುವೈತ್ ಮಾಹಿತಿ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !