June 17, 2026
Wednesday, June 17, 2026
spot_img

Iran–Israel ಸಂಘರ್ಷ: ದುಬೈನಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ಆದ್ಯತೆ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಇರಾನ್–ಇಸ್ರೇಲ್ ಸಂಘರ್ಷದ ಹಿನ್ನೆಲೆ ದುಬೈ ಸೇರಿದಂತೆ ಹಲವು ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ವಿಮಾನ ಸಂಚಾರ ಸ್ಥಗಿತಗೊಂಡಿರುವುದರಿಂದ ಅನೇಕರು ಸ್ವದೇಶಕ್ಕೆ ಮರಳಲು ಸಾಧ್ಯವಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಕುರಿತು ದೆಹಲಿಯ ನಿವಾಸಿ ಆಯುಕ್ತರೊಂದಿಗೆ ಸಮಾಲೋಚನೆ ನಡೆಸಿರುವುದಾಗಿ ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ:

ಯುಎಇ, ಇರಾನ್, ಇಸ್ರೇಲ್ ಹಾಗೂ ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರ ಸುರಕ್ಷತೆ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಅಗತ್ಯ ನೆರವು ಒದಗಿಸಲು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಯುದ್ಧ ಪರಿಸ್ಥಿತಿಯ ಕಾರಣ ಆತಂಕದಲ್ಲಿರುವ ಕುಟುಂಬಗಳು ಗಾಬರಿಗೊಳಗಾಗಬಾರದು ಎಂದು ಮನವಿ ಮಾಡಿರುವ ಸಿದ್ದರಾಮಯ್ಯ, ಸಂಪರ್ಕಕ್ಕೆ ಸಿಗದವರ ಮಾಹಿತಿ ಸಂಗ್ರಹಿಸಲು ಸಹಾಯವಾಣಿ ಆರಂಭಿಸುವಂತೆ ಸೂಚಿಸಿದ್ದಾರೆ. ಪ್ರತಿಯೊಬ್ಬ ಕನ್ನಡಿಗನ ಸುರಕ್ಷತೆ ಸರ್ಕಾರದ ಜವಾಬ್ದಾರಿ ಎಂದು ಸಿಎಂ ಪುನರುಚ್ಚರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !