September 30, 2026
Wednesday, September 30, 2026
spot_img

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ಪಲಾಯನ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿ ಸಂಘರ್ಷ ತಾರಕ್ಕೇರಿದ್ದು, ಇದರ ನಡುವೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಸಾವಿನ ಸುದ್ದಿ ಹರಿದಾಡುತ್ತಿದೆ. ಆದ್ರೆ ಮೊಜ್ತಬಾ ರಷ್ಯಾದಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿದೇಶಿ ಮಾಧ್ಯಮಗಳು ವರದಿ ಮಾಡಿವೆ.

ಈ ಕುರಿತು ಕುವೈತ್‌ನ ಪತ್ರಿಕೆಯೊಂದು ವರದಿ ಮಾಡಿದ್ದು, ದಾಳಿ ವೇಳೆ ಗಂಭೀರ ಗಾಯಗೊಂಡಿದ್ಧ ಮೊಜ್ತಬಾ ಖಮೇನಿ ಅವರು ರಷ್ಯಾದ ಮಿಲಿಟರಿ ವಿಮಾನದಲ್ಲಿ ಮಾಸ್ಕೋಗೆ ತೆರಳಿದ್ದಾರೆ ಎಂದು ಹೇಳಿಕೊಂಡಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಿವಾಸದಲ್ಲಿರುವ ಖಾಸಗಿ ವೈದ್ಯಕೀಯ ತಂಡದ ನಿಗಾದಲ್ಲಿ ಮೊಜ್ತಬಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಕುರಿತು ಇರಾನಿನ ಅಥವಾ ರಷ್ಯಾದ ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ.

ಆದರೆ ಇತ್ತ ಅಮೆರಿಕ ಅಧ್ಯಕ್ಷ ಟ್ರಂಪ್, ನಮ್ಮ ದಾಳಿಗೆ ಮೊಜ್ತಬಾ ಖಮೇನಿ ಕೂಡ ಹತ್ಯೆಯಾಗಿರುವ ಅನುಮಾನ ವ್ಯಕ್ತಪಡಿಸಿದ್ದಾರೆ.

Must Read