March 4, 2026
Wednesday, March 4, 2026
spot_img

ಇರಾನ್​ನ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್​ನ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆ ಇಂದು ನಿಗದಿಯಾಗಿತ್ತು. ಆದರೆ ಇದೀಗ ಮುಂದೂಡಿಕೆಯಾಗಿದೆ. ನಂತರದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿದೆ.

ಮೂರು ದಿನಗಳ ಕಾಲ ಈ ವಿದಾಯ ಕಾರ್ಯ ಸಾಗಲಿದೆ ಎಂದು ಇರಾನ್​ ಅಧಿಕೃತ ಸುದ್ದಿ ಸಂಸ್ಥೆ ಇರ್ನಾ ತಿಳಿಸಿತ್ತು. ಆದರೆ, ಅಂತಿಮ ಕ್ಷಣದಲ್ಲಿ ಈ ಕಾರ್ಯವನ್ನು ಮುಂದೂಡಲಾಗಿದೆ ಎಂದು ವರದಿ ಮಾಡಿದೆ.

ಇರಾನ್​ ಸ್ಥಳೀಯ ಕಾಲಮಾನದ ಅನುಸಾರ ಇಂದು ರಾತ್ರಿ 10 ರಿಂದ ಟೆಹ್ರಾನ್‌ನಲ್ಲಿರುವ ಇಮಾಮ್ ಖಮೇನಿ ಗ್ರ್ಯಾಂಡ್ ಮಸೀದಿಯಲ್ಲಿ ಖಮೇನಿ ಮೃತದೇಹಕ್ಕೆ ಸಾರ್ವಜನಿಕರು ಅಂತಿಮ ಗೌರವ ಸಲ್ಲಿಸಲು ವ್ಯವಸ್ಥೆ ಮಾಡಲಾಗಿತ್ತು. ಆದ್ರೆ ಇದೀಗ ಈ ಅಂತಿಮ ಕ್ರಿಯೆಯನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ವರದಿಯಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !