ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಇರಾಕ್ ರಾಜಧಾನಿ ಬಾಗ್ದಾದ್ನ ಉಪನಗರ ಸದರ್ ಸಿಟಿಯಲ್ಲಿನ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 30ಕ್ಕೂ ಮಂದಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಈದ್ ಹಬ್ಬದ ಪ್ರಯುಕ್ತ ಖರೀದಿಯಲ್ಲಿದ್ದ ವೇಳೆ ಬಾಂಬ್ ಸ್ಫೋಟಗೊಂಡಿದೆ. ಇದರ ಪರಿಣಾಮ 30ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಹೊತ್ತುಕೊಂಡಿದ್ದು, ಅಬು ಹಮ್ಜಾ ಅಲ್-ಇರಾಕಿ ಹೆಸರಿನ ಆತ್ಮಾಹುತಿ ಬಾಂಬರ್ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ. ಇದು ಆರು ತಿಂಗಳಲ್ಲಿ ಬಾಗ್ದಾದ್ನಲ್ಲಿ ನಡೆದ ಅತ್ಯಂತ ಭೀಕರ ಬಾಂಬ್ ಸ್ಫೋಟವಾಗಿದೆ. ಸ್ಫೋಟದಿಂದ 60 ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮುಸ್ತಾಫ ಅಲ್-ಖದಿಮಿ ತುರ್ತು ಸಭೆ ನಡೆಸಿದ್ದಾರೆ.