200ಕ್ಕೂ ಅಧಿಕ ರೈಲುಗಳ ಓಡಾಟ ರದ್ದು: ಪ್ರಯಾಣಿಕರ ಟಿಕೆಟ್ ವಾಪಸ್ ಮಾಡುವೆ ಎಂದ ಇಲಾಖೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತೀಯ ರೈಲ್ವೆ ಗುರುವಾರ ಒಂದು ದಿನ ಮಾತ್ರ ಬೃಹತ್ ಪ್ರಮಾಣದಲ್ಲಿ ರೈಲುಗಳನ್ನು ರದ್ದುಗೊಳಿಸಿದೆ. ಈ ದಿನವೊಂದರಲ್ಲೇ ದೇಶಾದ್ಯಂತ 200ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಿರುವುದಾಗಿ ತಿಳಿಸಿದ್ದು, ಇವುಗಳಲ್ಲಿ ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಿದರೆ, ಇನ್ನೂ ಕೆಲವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ದುರಸ್ತಿ, ನಿರ್ವಹಣೆ ಮತ್ತು ಸುರಕ್ಷತೆಗೆ ಸಂಬಂಧಿಸಿದ ಕೆಲಸಗಳು ನಡೆಯುತ್ತಿರುವುದರಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು IRCTC ಪ್ರಕಟಿಸಿದೆ.

180 ರೈಲುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ ಮತ್ತು 50 ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. ಈ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಐಆರ್‌ಸಿಟಿಸಿ ವೆಬ್‌ಸೈಟ್ ಮೂಲಕ ಟಿಕೆಟ್ ಕಾಯ್ದಿರಿಸಿದವರಿಗೆ ಸ್ವಯಂಚಾಲಿತವಾಗಿ ಟಿಕೆಟ್ ರದ್ದುಗೊಳಿಸಲಾಗುವುದು ಮತ್ತು ಹಣವನ್ನು ಅವರ ಖಾತೆಗೆ ಮರುಪಾವತಿಸಲಾಗುತ್ತದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಕೌಂಟರ್‌ಗಳ ಮೂಲಕ ಟಿಕೆಟ್ ಕಾಯ್ದಿರಿಸಲಾಗಿರವ ಪ್ರಯಾಣಿಕರು ರಿಸರ್ವೇಶನ್ ಕೌಂಟರ್ ಗಳಲ್ಲಿ ಟಿಕೆಟ್ ರದ್ದು ಮಾಡಿ ಹಣ ವಾಪಸ್ ಪಡೆಯಬಹುದು.

ಯಾವ ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂಬುದನ್ನು ತಿಳಿಯಲು ರೈಲ್ವೆ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!