RECRUITMENT | ಭಾರತೀಯ ರೈಲ್ವೆಯಲ್ಲಿ ಉದ್ಯೋಗಾವಕಾಶ : 148 ಹುದ್ದೆಗಳಿಗೆ ನೇರ ಸಂದರ್ಶನ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದಲ್ಲಿ 148 ಹಾಸ್ಪಿಟಾಲಿಟಿ ಮಾನಿಟರ್ (Hospitality Monitors)​​ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.

ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹಾಸ್ಪಿಟಾಲಿಟಿ ಮತ್ತು ಹೋಟೆಲ್ ಮ್ಯಾನೇಜ್​ಮೆಂಟ್​ನಲ್ಲಿ ಬಿಎಸ್ಸಿ ಪದವಿ ಪೂರ್ಣಗೊಳಿಸಿರಬೇಕು.

ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು.

ಹಾಸ್ಪಿಟಾಲಿಟಿ ಮಾನಿಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್‌ 13,2023ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!