ಹೊಸದಿಗಂತ ಡಿಜಿಟಲ್ ಡೆಸ್ಕ್:
ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅಚ್ಚರಿಯ ಸೋಲು ಕಂಡಿರುವ ಟೀಮ್ ಇಂಡಿಯಾ ಇದೀಗ ಎರಡನೇ ಪಂದ್ಯಕ್ಕೆ ಹೊಸ ತಂತ್ರದೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ.
ಬೆಲ್‌ಫಾಸ್ಟ್‌ನಲ್ಲಿ ನಡೆದ ಮೊದಲ ಮುಖಾಮುಖಿಯಲ್ಲಿ ಭಾರತ 34 ರನ್‌ಗಳಿಂದ ಸೋತಿದ್ದು, ಸರಣಿ ಸಮಬಲಗೊಳಿಸಲು ಪ್ಲೇಯಿಂಗ್ ಇಲೆವೆನ್‌ನಲ್ಲಿ ಮಹತ್ವದ ಬದಲಾವಣೆಗಳು ನಡೆಯುವ ಸಾಧ್ಯತೆ ಹೆಚ್ಚಾಗಿದೆ.
ವೈಭವ್‌ಗೆ ಸಿಗುತ್ತಾ ಚೊಚ್ಚಲ ಅವಕಾಶ?
ಮೊದಲ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡಲು ವಿಫಲರಾದರು. ಈ ಹಿನ್ನೆಲೆ ಯುವ ಪ್ರತಿಭೆ ವೈಭವ್ ಸೂರ್ಯವಂಶಿಗೆ ಎರಡನೇ ಟಿ20 ಪಂದ್ಯದಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ. ಐಪಿಎಲ್‌ನಲ್ಲಿ ಮಿಂಚಿದ್ದ ವೈಭವ್ ಮೇಲೆ ಅಭಿಮಾನಿಗಳ ನಿರೀಕ್ಷೆಯೂ ಹೆಚ್ಚಾಗಿದೆ.
ಇದನ್ನೂ ಓದಿ:
ಸೂರ್ಯಾಂಶ್ ಎಂಟ್ರಿಗೆ ವೇದಿಕೆ?
ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಬ್ಯಾಟ್ ಹಾಗೂ ಬಾಲ್ ಎರಡರಲ್ಲೂ ಪರಿಣಾಮ ಬೀರುವಲ್ಲಿ ವಿಫಲರಾದ ಕಾರಣ ಅವರ ಸ್ಥಾನಕ್ಕೆ ಸೂರ್ಯಾಂಶ್ ಶೆಡ್ಗೆ ಅವರನ್ನು ಆಡಿಸುವ ಸಾಧ್ಯತೆ ಇದೆ. ಇತ್ತೀಚಿನ ಪಂದ್ಯಗಳಲ್ಲಿ ಸೂರ್ಯಾಂಶ್ ಉತ್ತಮ ಫಾರ್ಮ್ ಪ್ರದರ್ಶಿಸಿದ್ದಾರೆ.
ಬೌಲಿಂಗ್ ವಿಭಾಗದಲ್ಲೂ ಬದಲಾವಣೆ?
ವೇಗಿ ಪ್ರಸಿದ್ಧ್ ಕೃಷ್ಣ ಮೊದಲ ಪಂದ್ಯದಲ್ಲಿ ದುಬಾರಿ ಬೌಲಿಂಗ್ ಮಾಡಿದ್ದು, ನಾಲ್ಕು ಓವರ್‌ಗಳಲ್ಲಿ ಹೆಚ್ಚಿನ ರನ್ ಬಿಟ್ಟುಕೊಟ್ಟಿದ್ದರು. ಹೀಗಾಗಿ ಅವರ ಬದಲಿಗೆ ಯುವ ವೇಗಿ ಪ್ರಿನ್ಸ್ ಯಾದವ್‌ಗೆ ಅವಕಾಶ ನೀಡುವ ಕುರಿತು ತಂಡದ ಆಡಳಿತ ಮಂಡಳಿ ಚಿಂತನೆ ನಡೆಸುತ್ತಿದೆ.
ಮೊದಲ ಸೋಲಿನ ಬಳಿಕ ನಾಯಕ ಶ್ರೇಯಸ್ ಅಯ್ಯರ್ ಮತ್ತು ಕೋಚ್ ಗೌತಮ್ ಗಂಭೀರ್ ಎರಡನೇ ಪಂದ್ಯದಲ್ಲಿ ಹೊಸ ಸಂಯೋಜನೆಯೊಂದಿಗೆ ಕಣಕ್ಕಿಳಿದು ಸರಣಿಯನ್ನು ಸಮಬಲಗೊಳಿಸುವ ಗುರಿ ಹೊಂದಿದ್ದಾರೆ.



