ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ದಾಖಲೆ ಬರೆದ ಐರ್ಲೆಂಡ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಫ್ಘಾನಿಸ್ತಾನ – ಐರ್ಲೆಂಡ್ (Afghanistan vs Ireland)ನಡುವಿನ ಏಕೈಕ ಟೆಸ್ಟ್ ಪಂದ್ಯದಲ್ಲಿ ಕ್ರಿಕೆಟ್ ಶಿಶು ಐರ್ಲೆಂಡ್ ಗೆಲುವು ಸಾಧಿಸುವ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ದಾಖಲೆ ನಿರ್ಮಿಸಿದೆ.

ಅಬುಧಾಬಿಯಲ್ಲಿ ಅಫ್ಘಾನಿಸ್ತಾನ ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿದ ಐರ್ಲೆಂಡ್‌ಗೆ ಇದು ಮೊದಲ ಟೆಸ್ಟ್ ಸರಣಿ ಗೆಲುವಾಗಿದೆ. ಇದಕ್ಕೂ ಮೊದಲು ತಂಡವು 7 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಎಲ್ಲದರಲ್ಲೂ ಸೋಲನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಗೆಲುವಿಗೆ 111 ರನ್​ಗಳ ಗುರಿ ಪಡೆದ ಐರ್ಲೆಂಡ್, ನಾಯಕ ಆಂಡ್ರ್ಯೂ ಬಾಲ್ಬಿರ್ನಿ (Andrew Balbirnie) ಅವರ ಅಜೇಯ ಅರ್ಧಶತಕದ ನೆರವಿನಿಂದ 4 ವಿಕೆಟ್​ ಕಳೆದುಕೊಂಡು ಜಯದ ನಗೆಬೀರಿತು.

ಐರ್ಲೆಂಡ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಭಾಗವಾಗಿಲ್ಲದ ಕಾರಣ ಹೆಚ್ಚಿನ ಸಂದರ್ಭಗಳಲ್ಲಿ ಕೇವಲ 1ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತದೆ. ಇದುವರೆಗೆ ತಂಡವು ಶ್ರೀಲಂಕಾ ವಿರುದ್ಧ ಒಮ್ಮೆ ಮಾತ್ರ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!