ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಟಕ ಪ್ರದರ್ಶನ ವೇಳೆ ಕಬ್ಬಿಣದ ಗೇಟ್ ಕುಸಿದುಬಿದ್ದು 30 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಗಾಯಾಳುಗಳನ್ನು ಸಲೇಪುರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅವರಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಲಾಗಿದೆ.
ರಾಜಾ ರಾಣಿ ಜಾತ್ರೆ ತಂಡವು ಶುಕ್ರವಾರದಿಂದ ರಾಯಸುಂಗುಡದಲ್ಲಿ ಪ್ರದರ್ಶನ ನೀಡುತ್ತಿದೆ. ಶನಿವಾರ ರಾತ್ರಿ ಸೆಕೆಂಡ್ ಶೋ ಆರಂಭವಾಗುವ ಮುನ್ನವೇ ಈ ದುರ್ಘಟನೆ ನಡೆದಿದೆ.
ಅದೇ ಸಮಯದಲ್ಲಿ ಜನಸಮೂಹವು ಪ್ರವೇಶಿಸಲು ಪ್ರಯತ್ನಿಸಿದಾಗ ಗೇಟ್ ಕುಸಿದಿದೆ ಎಂದು ಹೇಳಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿವೆ ಎನ್ನಲಾಗಿದೆ.