Sunday, November 9, 2025

ಐರನ್‌ಮ್ಯಾನ್ 70.3 ಓಟ ಯಶಸ್ವಿಯಾಗಿ ಪೂರ್ಣ: ಸೂರ್ಯ, ಅಣ್ಣಾಮಲೈ ಸಾಧನೆಗೆ ಪ್ರಧಾನಿ ಮೋದಿ ಮೆಚ್ಚುಗೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಸಂಸದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಇಂದು ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ನಂತಹ ಕಾರ್ಯಕ್ರಮಗಳಲ್ಲಿ ನಮ್ಮ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದನ್ನು ನೋಡಿ ಸಂತೋಷವಾಯಿತು. ಇಂತಹ ಕಾರ್ಯಕ್ರಮಗಳು ಫಿಟ್ ಇಂಡಿಯಾ ಆಂದೋಲನಕ್ಕೆ ಕೊಡುಗೆ ನೀಡುತ್ತವೆ. ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು. ಐರನ್‌ಮ್ಯಾನ್ ಟ್ರಯಥ್ಲಾನ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರ ಪೈಕಿ ನಮ್ಮ ಯುವ ಪಕ್ಷದ ಸಹೋದ್ಯೋಗಿಗಳಾದ ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ ಸೇರಿದ್ದಾರೆ ಎಂಬುದನ್ನು ತಿಳಿದು ಸಂತೋಷವಾಯಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಸತತ ಎರಡನೇ ವರ್ಷವೂ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಮತ್ತು ಶಿಸ್ತಿಗೆ ಮಾದರಿಯಾಗಿದ್ದಾರೆ.

https://x.com/narendramodi/status/1987540095868829886?ref_src=twsrc%5Etfw%7Ctwcamp%5Etweetembed%7Ctwterm%5E1987540095868829886%7Ctwgr%5E23b9b465aa5d39723695cf77e4e1ebeaa9de9f4f%7Ctwcon%5Es1_&ref_url=https%3A%2F%2Fpublictv.in%2Ftejasvi-surya-annamalai-complete-ironman-70-3-in-goa-pm-narendra-modi-praises%2F

ಈ ವರ್ಷದ ಐರನ್‌ಮ್ಯಾನ್‌ನಲ್ಲಿ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಸಹ ಭಾಗವಹಿಸಿದ್ದು ವಿಶೇಷ. ಸಂಸದ ಸೂರ್ಯ ಅವರು ಸ್ಪರ್ಧೆಯ ಮೂರು ಕಠಿಣ ಹಂತಗಳಾದ – 1.9 ಕಿ.ಮೀ ಈಜು, 90 ಕಿ.ಮೀ ಸೈಕ್ಲಿಂಗ್, ಮತ್ತು 21.1 ಕಿ.ಮೀ ಓಟವನ್ನು 7 ಗಂಟೆ 49 ನಿಮಿಷಗಳಲ್ಲಿ ಪೂರ್ಣಗೊಳಿಸಿದ್ದಾರೆ. ಈಜಲು ಸುಮಾರು 44 ನಿಮಿಷ, ಸೈಕ್ಲಿಂಗ್‌ಗೆ 3 ಗಂಟೆ 47 ನಿಮಿಷ ಮತ್ತು ಓಟಕ್ಕೆ 2 ಗಂಟೆ 54 ನಿಮಿಷಗಳನ್ನು ತೆಗೆದುಕೊಂಡರು. ಮತ್ತೊಂದೆಡೆ, ಅಣ್ಣಾಮಲೈ ಅವರು ಈ ಓಟವನ್ನು 8 ಗಂಟೆ 13 ನಿಮಿಷಗಳಲ್ಲಿ ಪೂರ್ಣಗೊಳಿಸಿದರು.

error: Content is protected !!