ಹೊಸದಿಗಂತ ಡಿಜಿಟಲ್ ಡೆಸ್ಕ್:
NEET UG ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂಬುದಾಗಿ ಸಲ್ಲಿಕೆಯಾದ ಹಲವು ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯವು ಇಂದು ವಿಚಾರಣೆ ನಡೆಸಿದೆ .
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ ಹಾಗೂ ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ಸಿಜೆಐ ಚಂದ್ರಚೂಡ್ ಅವರಿದ್ದ ನ್ಯಾಯಪೀಠವು ತಿಳಿಸಿತು. ಹಾಗೆಯೇ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮದ ಕುರಿತಂತೆ ಮಹತ್ವದ ಮಾಹಿತಿ ನೀಡಬೇಕು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೀಟ್ ಮೂರು ನಿರ್ದೇಶನಗಳನ್ನು ನೀಡಿದೆ. ಹಾಗೆಯೇ, ತನಿಖೆಯ ವರದಿ ನೀಡಬೇಕು ಎಂಬುದಾಗಿ ಸಿಬಿಐಗೂ ಸುಪ್ರೀಂ ಕೋರ್ಟ್ ಸೂಚಿಸಿದೆ. ಬಳಿಕ ಜುಲೈ 11ಕ್ಕೆ ವಿಚಾರಣೆ ಮುಂದೂಡಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಯಾವಾಗ ಎಂಬುದರ ಮಾಹಿತಿ ನೀಡಬೇಕು, ಅದ್ರಲ್ಲಿ ಯಾವ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ ಎಂಬುದರ ಮಾಹಿತಿ ಪ್ರತ್ಯೇಕವಾಗಿ ಇರಬೇಕು. ಪ್ರಶ್ನೆಪತ್ರಿಕೆ ಸೋರಿಕೆಯಾದ ದಿನ ಹಾಗೂ ಪರೀಕ್ಷೆ ನಡೆದ ದಿನದ ನಡುವೆ ಎಷ್ಟು ಸಮಯದ ಅಂತರವಿತ್ತು ಎಂಬುದರ ಮಾಹಿತಿ ಕೊಡಿ ಎಂದು ನಿರ್ದೇಶನ ನೀಡಿದೆ.