ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯ ನಾಗಮಂಗಲದ ಬದರಿಕೊಪ್ಪಲಿನ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದಿರುವ ಕಲ್ಲು ತೂರಾಟ ನಿಸ್ಸಂದೇಹವಾಗಿ ದುಷ್ಕರ್ಮಿಗಳ ಕೃತ್ಯ ಜಗತ್ತನ್ನೇ ಬೆದರಿಸುವ ಕೃತ್ಯವಾಗಿದೆ. ಆರೋಪಿಗಳು ಯಾವುದೇ ಧರ್ಮದವರಾಗಿರಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಮೇಲಾಗಿ ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಕಳೆದ ಒಂದೂವರೆ ವರ್ಷಗಳಲ್ಲಿ ಗಲಭೆ, ಅಶಾಂತಿ, ಹಿಂಸಾಚಾರಗಳಿಲ್ಲದೆ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ನಾಡು, ಧರ್ಮದ ನೆಲೆಯಲ್ಲಿ ದೇಶವನ್ನು ವಿಭಜಿಸಲು ಯತ್ನಿಸುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಡಿವಾಣ ಹಾಕುತ್ತಿದೆ.
ಜಾತಿ ಅಥವಾ ಧರ್ಮ. ಸಾರ್ವಜನಿಕರು ಪ್ರಚೋದನೆಗೆ ಮಣಿಯದೆ ಶಾಂತಿ ಸಂಯಮ ಕಾಪಾಡುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಕರೆ ನೀಡಿದರು.