ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ವಿವಿಧೆಡೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮುಂದುವರಿದಿದ್ದು, ರಾಮನಗರ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯ ತೋರಿದ ಹಿನ್ನಲೆಯಲ್ಲಿ ಇಬ್ಬರು ಸಿಬ್ಬಂದಿಯನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಆದೇಶ ಹೊರಡಿಸಿದ್ದಾರೆ.
ಇದೆ ಸಂದರ್ಭ ಸಮೀಕ್ಷೆ ವೇಳೆ ಬಳ್ಳಾರಿ ಜಿಲ್ಲೆಯಲ್ಲಿ ಗುರುತಿಸಲಾದ ೩.೮೫ ಲಕ್ಷ ಮನೆಗಳ ಪೈಕಿ ೧.೪೫ ಲಕ್ಷ ಮನೆ ಪೂರ್ಣಗೊಂಡಿದ್ದು, ಶೇಕಡಾ ೩೮ರಷ್ಟು ಈವರೆಗೆ ಪ್ರಗತಿಯಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಿಳಿಸಿದ್ದಾರೆ.
ನಿಗದಿತ ಗುರಿ ತಲುಪಲು ಮತ್ತು ಜಿಲ್ಲೆಯನ್ನು ರಾಜ್ಯದಲ್ಲಿಯೇ ಮುಂಚೂಣಿಯಲ್ಲಿರಿಸಲು ಸೂಕ್ತ ತಾಂತ್ರಿಕ ಯೋಜನೆ ರೂಪಿಸಿ ಗಣತಿದಾರರಿಗೆ ಸೂಕ್ತ ಮಾರ್ಗದರ್ಶನ ಮಾಡಬೇಕು ಎಂದು ಸರ್ವೆ ನೋಡಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಶೇಕಡಾ ೩೫ ರಷ್ಟು ಪೂರ್ಣಗೊಂಡಿದ್ದು, ನಿನ್ನೆ ಒಂದೇ ದಿನ ೩೬ ಸಾವಿರ ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮ ಪಂಚಾಯಿತಿ ಕರ ವಸೂಲಿಗಾರ ಶಿವಾನಂದ ಆಚಮಟ್ಟಿ ಅವಧಿಗೂ ಮೊದಲೇ ೯೧ ಮನೆಗಳ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಿ ಗಮನಸೆಳೆದಿದ್ದಾರೆ.
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಬೇಜವಾಬ್ದಾರಿ, ನಿರ್ಲಕ್ಷ್ಯ: ರಾಮನಗರದಲ್ಲಿ ಇಬ್ಬರು ಸಿಬ್ಬಂದಿ ಸಸ್ಪೆನ್ಡ್
