ಹೊಸದಿಗಂತ ಡಿಜಿಟಲ್ ಡೆಸ್ಕ್:
ವಕ್ಪ್ ವಿವಾದ ಸಂಬಂಧ ಬಿಜೆಪಿ ನಾಯಕರ ಪ್ರತಿಭಟನೆಯ ನಡುವೆಯೇ ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ ನೀಡಿದ್ದು, ವಕ್ಫ್ ಹೆಸರಲ್ಲಿ ಶಾಂತಿ ಕದಡಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಕ್ಫ್ ವಿಷಯವನ್ನು ಬಿಜೆಪಿಯವರು ರಾಜಕೀಯ ಅಸ್ತ್ರವಾಗಿ ಉಪಯೋಗ ಮಾಡಿಕೊಳ್ಳುತ್ತಿದ್ದಾರೆ. ವಕ್ಫ್ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ಕೋಮು-ಗಲಭೆ ನಡೆಸಿ ಶಾಂತಿ ಕದಡುವ ಪ್ರಯತ್ನ ನಡೆದರೆ ಅದನ್ನು ನಿರ್ದಾಕ್ಷಿಣ್ಯವಾಗಿ ಹತ್ತಿಕ್ಕಲಾಗುವುದು.
ಕೋಮು-ಗಲಭೆ ಶಾಂತಿ ಹಾಳು ಮಾಡಲು ಅವರು ಏನಾದರೂ ಮಾಡಬಹುದು. ಅದಕ್ಕಾಗಿ ಅಭಿಯಾನ ಮಾಡುತ್ತಿದ್ದಾರೆ. ಶಾಂತಿ ಕದಡಲು ಪ್ರಯತ್ನಿಸಿದರೆ ಸುಲಭವಾಗಿ ನಾವು ಬಿಡಲ್ಲ. ಯಾವ ರೀತಿ ಕ್ರಮ ಕೈಗೊಳ್ಳುತ್ತೇವೆ ಎಂಬುದನ್ನು ನೀವು ಊಹೆ ಮಾಡಲು ಆಗುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು.