Monday, October 2, 2023

Latest Posts

ನೀರಾವರಿ ಇಲಾಖೆಯ ಸಭೆ: ಮೇಕೆದಾಟು ಯೋಜನೆಗೆ ಆದ್ಯತೆ ನೀಡಲು ಅಧಿಕಾರಿಗಳಿಗೆ ಡಿಸಿಎಂ ಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಲಸಂಪನ್ಮೂಲ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ನೀರಾವರಿ ಇಲಾಖೆಯ ಸಭೆ ನಡೆಸಿ ಸಭೆಯಲ್ಲಿ ಮೇಕೆದಾಟು ಯೋಜನೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದರು.

ಚುನಾವಣೆಗೂ ಮುನ್ನ ಮೇಕೆದಾಟು ಪಾದಯಾತ್ರೆ ನೇತೃತ್ವ ವಹಿಸಿದ್ದ ಡಿಕೆಶಿ, ಈಗ ಮತ್ತೆ ಯೋಜನೆಯ ಬಗ್ಗೆ ಮಾತನಾಡಿರುವುದು ಮಹತ್ವ ಪಡೆದುಕೊಂಡಿದೆ.

ಮೇಕೆದಾಟು ಯೋಜನೆ ಅನುಷ್ಠಾನಗೊಂಡರೆ ಬೆಂಗಳೂರಿನ ನೀರಿನ ಬವಣೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಮೊದಲ ಸಭೆಯಲ್ಲೇ ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡು ಯೋಜನೆ ವಿರುದ್ಧ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (ಸಿಡಬ್ಲ್ಯುಎಂಎ) ಈ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿದೆ. ಈ ಯೋಜನೆಗೆ ರೂ 9,000 ಕೋಟಿ (2019 ದರಗಳು) ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ’ ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ಕರ್ನಾಟಕಕ್ಕೆ ಹಂಚಿಕೆಯಾದ ಹೆಚ್ಚುವರಿ 4.75 ಟಿಎಂಸಿ ಅಡಿ ನೀರನ್ನು ಬಳಸಿಕೊಳ್ಳಲು ಈ ಯೋಜನೆ ಅನುಕೂಲ ಮಾಡಿಕೊಡಲಿದೆ.

67.16 ಟಿಎಂಸಿ ಅಡಿ ನೀರನ್ನು ಸಂಗ್ರಹಿಸಲು ಮೇಕೆದಾಟು ಅಣೆಕಟ್ಟನ್ನು ನಿರ್ಮಿಸಲಾಗುತ್ತದೆ. 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಯುನಿಟ್‌ಗಳನ್ನು ನಿರ್ಮಿಸಬೇಕಿದೆ. ಇತರ ಮೂಲಸೌಕರ್ಯಗಳು, ನೀರನ್ನು ಎತ್ತುವ ಜಾಕ್‌ವೆಲ್-ಕಮ್-ಪಂಪ್‌ಹೌಸ್‌ಗಳ ನಿರ್ಮಾನ ಯೋಜನೆಯ ಪ್ರಮುಖ ಅಂಶಗಳಾಗಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!