ಹೊಸದಿಗಂತ ಡಿಜಿಟಲ್ ಡೆಸ್ಕ್:
2025-26ನೇ ಸಾಲಿನಿಂದ 1ನೇ ತರಗತಿಗೆ ದಾಖಲಿಸಲು ಮಕ್ಕಳಿಗೆ ಜೂ.1ಕ್ಕೆ ಕಡ್ಡಾಯವಾಗಿ ಆರು ವರ್ಷ ಪೂರ್ಣಗೊಂಡಿರಬೇಕೆಂಬ ನಿಯಮ ಈಗ ಮತ್ತೆ ಚರ್ಚೆಗೀಡಾಗಿದೆ.
ಈ ನಿಯಮ ಜಾರಿಯಿಂದ ಆರು ವರ್ಷ ಪೂರ್ಣಗೊಳ್ಳಲು ಕೆಲವೇ ದಿನಗಳಿರುವ, ವಾರ ಕಡಿಮೆ ಇರುವ ಸಾಕಷ್ಟು ಮಕ್ಕಳು ಶಾಲಾ ದಾಖಲಾತಿಯಿಂದ ವಂಚಿತರಾಗುತ್ತಾರೆ. ಹೀಗಾಗಿ ಕೆಲ ತಿಂಗಳು ವಿನಾಯಿತಿ ನೀಡಬೇಕೆಂದು ಪೋಷಕರ ಸಂಘಟನೆಗಳು ಆಗ್ರಹಿಸುತ್ತಿವೆ.
ಕೆಲ ಖಾಸಗಿ ಶಾಲಾ ಸಂಘಟನೆಗಳು ಸರ್ಕಾರ ಯಾವುದೇ ಕಾರಣಕ್ಕೂ ವಿನಾಯಿತಿ ನೀಡಬಾರದು. ಎರಡು ವರ್ಷಗಳ ಹಿಂದೆಯೇ ಎಲ್‌ಕೆಜಿ ಯುಕೆಜಿ ದಾಖಲಾತಿಗೂ ವಯೋಮಿತಿ ನಿಗದಿಪಡಿಸಿ ಆದೇಶ ಮಾಡಲಾಗಿದೆ. ಹಾಗಾಗಿ ಈಗ ಎಲ್‌ಕೆಜಿ ಯುಕೆಜಿ ತರಗತಿ ಮಕ್ಕಳು ಬರುವ ಸಾಲಿನಲ್ಲಿ 1ನೇ ತರಗತಿಗೆ ದಾಖಲಾಗಲು ವಯೋಮಿತಿಯಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಪ್ರತಿಪಾದಿಸಿದೆ.
ಈಗಾಗಲೇ 2025-26ಕ್ಕೆ 1ನೇ ತರಗತಿಗೆ ಬರುವ ಮಕ್ಕಳಿಗೆ 6 ವರ್ಷ ಪೂರ್ಣಗೊಳ್ಳುವ ಲೆಕ್ಕಾಚಾರದಲ್ಲೇ ಎಲ್‌ಕೆಇ, ಯುಕೆಜಿಗೆ ಕಳೆದ ಎರಡು ವರ್ಷಗಳಿಂದ ಕ್ರಮವಾಗಿ 4 ವರ್ಷ ಮತ್ತು 5 ವರ್ಷ ಪೂರ್ಣಗೊಂಡಿರುವ ಮಕ್ಕಳನ್ನೇ ದಾಖಲಾತಿ ಮಾಡಿಕೊಳ್ಳಲಾಗಿದೆ.