ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರಶ್ಮಿಕಾ ಮಂದಣ್ಣ ಪ್ರಶಾಂತ್ ನೀಲ್ ಜೊತೆ ಸಿನಿಮಾವೊಂದನ್ನು ಮಾಡ್ತಿದ್ದಾರೆ ಎನ್ನಲಾಗಿದೆ. ಇದಕ್ಕೆ ಮೈತ್ರಿ ಮೂವಿ ಮೇಕರ್ಸ್ ಹಣ ಹಾಕಲಿದೆಯಂತೆ!
ರಶ್ಮಿಕಾ ಮಂದಣ್ಣ ಅವರು ಈ ಮೊದಲೇ ‘ಮೈತ್ರಿ ಮೂವೀ ಮೇಕರ್ಸ್’ ಜೊತೆ ಕೆಲಸ ಮಾಡಿದ್ದಾರೆ. ‘ಪುಷ್ಪ’ ಹಾಗೂ ‘ಪುಷ್ಪ 2’ ಚಿತ್ರವನ್ನು ಮೈತ್ರಿ ಅವರೇ ನಿರ್ಮಾಣ ಮಾಡಿದ್ದರು. ಈ ವೇಳೆ ರಶ್ಮಿಕಾ ಹಾಗೂ ಈ ಸಂಸ್ಥೆ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಈಗ ಅದನ್ನು ಮೈತ್ರಿ ಮೂವೀ ಮೇಕರ್ಸ್ ಅವರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.
ಮೈತ್ರಿ ನಿರ್ಮಾಣ ಮಾಡುತ್ತಿರುವ ಈ ಚಿತ್ರದಲ್ಲಿ ಹೀರೋ ಯಾರು ಎಂಬುದು ಸದ್ಯದ ಪ್ರಶ್ನೆ. ಕೆಲವು ವರದಿಗಳ ಪ್ರಕಾರ ಈ ಚಿತ್ರಕ್ಕೆ ಜೂನಿಯರ್ ಎನ್ಟಿಆರ್ ನಾಯಕ ಎಂದು ಹೇಳಲಾಗುತ್ತಿದೆ. ಮೈತ್ರಿಗೆ ನೀಡಿದ್ದ ಒಂದು ಕಾಲ್ಶಿಟ್ ಜೂನಿಯರ್ ಎನ್ಟಿಆರ್ ಬಳಿ ಇದೆ. ಪ್ರಶಾಂತ್ ನೀಲ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಈಗಾಗಲೇ ಸಿನಿಮಾದ ಕೆಲಸ ಶುರುವಾಗಿದೆ ಎನ್ನಲಾಗಿದೆ.
ಕೆಲವು ರಿಪೋರ್ಟ್‌ಗಳ ಪ್ರಕಾರ ನಟ ವಿಜಯ್ ದೇವರಕೊಂಡ ಈ ಸಿನಿಮಾಗೆ ಹೀರೋ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.