Saturday, December 9, 2023

Latest Posts

ಬಿಜೆಪಿಯೊಂದಿಗೆ ವಿಲೀನಗೊಳ್ಳಲಿದೆಯೇ ಕ್ಯಾ.ಅಮರೀಂದರ್‌ ಸಿಂಗ್‌ ಪಕ್ಷ ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸ್ಥಾಪಿಸಿದ ಪಂಜಾಬ್ ಲೋಕ ಕಾಂಗ್ರೆಸ್ ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎಂದು ಊಹಾಪೋಹಗಳು ಹರಿದಾಡುತ್ತಿದ್ದು ಸೋಮವಾರ ನಡೆಯಲಿರುವ ಪಕ್ಷದ ಸಭೆಯ ನಂತರ ಈ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.

ಸೆಪ್ಟೆಂಬರ್ 2021 ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಒತ್ತಾಯಿಸಿದ ನಂತರ ಅಮರಿಂದರ್ ಸಿಂಗ್ ಅವರು ಪಕ್ಷವನ್ನು ರಚಿಸಿದ್ದರು. ಅವರ ಬದಲಿಗೆ ಚರಂಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಲಾಯಿತು.

ನಂತರ, ಅವರು 2022 ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯೊಂದಿಗೆ ಮೈತ್ರಿ ಘೋಷಿಸಿದರು.

117 ಸದಸ್ಯ ಬಲದ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 92 ಸ್ಥಾನಗಳನ್ನು ಗಳಿಸುವುದರೊಂದಿಗೆ ಪಂಜಾಬ್ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದ್ದು, ಕೇವಲ 18 ಸ್ಥಾನಗಳನ್ನು ಮಾತ್ರ ಪಡೆದುಕೊಂಡಿದೆ. ಬಿಜೆಪಿ ಮತ್ತು ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ನಂತಹ ಇತರ ಸಾಂಪ್ರದಾಯಿಕ ಆಟಗಾರರನ್ನು ಆಪ್‌ ನಾಶ ಮಾಡಿತ್ತು.

ಪಟಿಯಾಲ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಎಎಪಿ ಅಭ್ಯರ್ಥಿಯಿಂದ 19,873 ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಪ್ರಸ್ತುತ ಅವರ ಪಕ್ಷವು ಬಿಜೆಪಿಯೊಂದಿಗೆ ಸೇರ್ಪಡೆಗೊಳ್ಳಲಿದೆ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!