ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ‘ಗುಡ್‌ಬೈ’ ಹೇಳಿಕೆ ನಿಜವೇ?

ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ರಾಜೀನಾಮೆ ವದಂತಿ ಸುಳ್ಳು ಎಂದು ತಮಿಳುನಾಡು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ನೈನಾರ್ ನಾಗೇಂದ್ರನ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಣ್ಣಾಮಲೈ ಎಲ್ಲೂ ಆ ರೀತಿಯ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ.
ಎಐಎಡಿಎಂಕೆಯೊಂದಿಗಿನ ಮೈತ್ರಿ ಮುಂದುವರಿಸಲು ಕೇಂದ್ರ ನಾಯಕರು ನಿರ್ಧರಿಸಿದ್ದಲ್ಲಿ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಣ್ಣಾಮಲೈ ಹೇಳಿದ್ದಾರೆ ಎಂಬ ವದಂತಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.
ಮೈತ್ರಿ ಬಗ್ಗೆ ರಾಜ್ಯ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಅಲ್ಲದೆ ಮೈತ್ರಿ ನಿರಾಕರಣೆ ಅಣ್ಣಾಮಲೈ ಅವರ ವೈಯಕ್ತಿಕ ಅಭಿಪ್ರಾಯ ಇರಬಹುದು. ಸಭೆಯಲ್ಲಿ ಈ ವಿಚಾರ ಚರ್ಚೆಗೆ ಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!