ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗಷ್ಟೇ ನಟ ಕಿಚ್ಚ ಸುದೀಪ್ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ. ಇದೀಗ ಚಿತ್ರರಂಗದ ಮತ್ತೊಬ್ಬ ಸ್ಟಾರ್ ನಟ ಬಿಜೆಪಿಗೆ ಎಂಟ್ರಿ ಕೊಡುವ ಎಲ್ಲಾ ಸೂಚನೆಗಳು ಕಾಣಿಸುತ್ತಿವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಸ್ಟಾರ್ ಹೀರೋ ರಿಷಬ್ ಶೆಟ್ಟಿ ಮತ್ತೆ ಕಾಣಿಸಿಕೊಂಡಿದ್ದಾರೆ. ಹಲವು ತಿಂಗಳಿನಿಂದ ರಿಷಬ್ ಚುನಾವಣೆಯಲ್ಲಿ ಸಕ್ರಿಯರಾಗಿ ಪಾಲ್ಗೊಳ್ತಾರೆ ಎನ್ನುವ ಮಾತು ಕೇಳಿ ಬರುತ್ತಿತ್ತು. ಆದರೆ ಇದೀಗ ನಿದರ್ಶನದಂತೆ ಸಿಎಂ ಜತೆ ರಿಷಬ್ ಕಾಣಿಸಿದ್ದಾರೆ.
ಬೊಮ್ಮಾಯಿ ದಂಪತಿ ಸದ್ಯ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು, ಇಂದು ಕೊಲ್ಲೂರು ಮೂಕಾಂಬಿಕಾ ದೇವಿ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ರಿಷಬ್ ಶೆಟ್ಟಿ ಕೂಡ ಕಾಣಿಸಿಕೊಂಡಿದ್ದಾರೆ. ಹೀಗಾಗಿ ರಿಷಬ್ ಬಿಜೆಪಿ ಸೇರಬಹುದಾ ಎನ್ನುವ ಕುತೂಹಲ ಕಾಣಿಸ್ತಿದೆ.