ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಯೋಧ್ಯೆಯಲ್ಲಿ ಜನವರಿ 22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠೆಯೊಂದಿಗೆ ಭವ್ಯ ಮಂದಿರ ಲೋಕಾರ್ಪಣೆಗೊಳ್ಳಲಿದೆ. ಲಕ್ಷಾಂತರ ಮಂದಿ ಶ್ರೀರಾಮನ ಗತವೈಭವ ಕಣ್ತುಂಬಿಕೊಳ್ಳಲು ಆಯೋಧ್ಯೆಯತ್ತ ದಾಪುಗಾಲಿಡುತ್ತಿದ್ದಾರೆ.
ಇತ್ತ ಶ್ರೀರಾಮ ಜನ್ಮಭೂಮಿ ಟ್ರಸ್ಟ್, ಗಣ್ಯರು ಸಾಧು ಸಂತರು, ಯೋಗಿಗಳ ಜೊತೆಗೆ ಬಹುತೇಕ ರಾಜಕೀಯ ನಾಯಕರನ್ನು ಆಹ್ವಾನಿಸಿದೆ. ಈ ಪೈಕಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಟಿಎಂಸಿ ನಾಯಕರನ್ನೂ ಆಹ್ವಾನಿಸಲಾಗಿದೆ. ಆದರೆ ಮಮತಾ ಬ್ಯಾನರ್ಜಿ ಹಾಗೂ ಟಿಎಂಸಿ ನಾಯಕರು ರಾಮ ಮಂದಿರ ಪ್ರಾಣಪ್ರತಿಷ್ಠೆಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ಹೇಳುತ್ತಿವೆ.
ಧಾರ್ಮಿಕ ವಿಚಾರಗಳನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ರಾಮ ಮಂದಿರ ಬಿಜೆಪಿ ಪಕ್ಷದ ಕಾರ್ಯಕ್ರಮವಲ್ಲ ಅನ್ನೋದನ್ನು ಬಿಂಬಿಸಿ ಬಿಜೆಪಿ ಸಿಗುವ ಸಂಪೂರ್ಣ ಕ್ರಿಡಿಟ್ ಹರಿದು ಹಂಚಿ ಹೋಗುವಂತೆ ಮಾಡಲು ವಿಪಕ್ಷಗಳು ಮುಂದಾಗಿದೆ ಅನ್ನೋ ಆರೋಪಗಳು ಕೇಳಿಬರುತ್ತಿದೆ. ಕಾರಣ ಮಮತಾ ಬ್ಯಾನರ್ಜಿ ಹಾಗೂ ಟಿಎಂಸಿ ನಾಯಕರು ರಾಮ ಮಂದಿರ ಪ್ರಾಣಪ್ರತಿಷ್ಠೆಯಿಂದ ದೂರ ಉಳಿಯುವ ಸಾಧ್ಯತೆಗಳಿದೆ ಎಂದು ಮೂಲಗಳು ಹೇಳುತ್ತಿದೆ.
ಇತ್ತ ಕಮ್ಯೂನಿಸ್ಟ್ ಪಾರ್ಟಿ ನಾಯಕರು ರಾಮ ಮಂದಿರ ಉದ್ಘಾಟನೆಗೆ ಹಾಜರಾಗುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಸಿತಾರಾಂ ಯಚೂರಿ ಕೂಡ ರಾಮ ಮಂದಿರವನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದರು. ಇಂಡಿಯಾ ಒಕ್ಕೂಟದ ನಾಯಕರು ಇದೇ ಕಾರಣ ನೀಡಿ ರಾಮ ಮಂದಿರ ಉದ್ಘಾಟನೆಯಿಂದ ಹಿಂದೆ ಸರಿಯುತ್ತಿದ್ದಾರೆ.